Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಇಡೀ ದೇಶದ ಪೋಷಕರನ್ನು ನೀವು ಅವಮಾನಿಸಿದ್ದೀರಿ – ಯೂಟ್ಯೂಬರ್ ರಣವೀರ್ ಹೇಳಿಕೆಗೆ ಸುಪ್ರೀಂ ಕೆಂಡಾಮಂಡಲ

Public TV
Last updated: February 18, 2025 1:18 pm
Public TV
Share
2 Min Read
Ranveer Allahabadia
SHARE

– ಬಂಧನಕ್ಕೆ ಮಧ್ಯಂತರ ತಡೆ
– ಹೊಸ ಎಫ್‌ಐಆರ್ ದಾಖಲಿಸದಂತೆ ಸೂಚನೆ

ನವದೆಹಲಿ: ಇಂಡಿಯಾಸ್‌ ಗಾಟ್‌ ಲ್ಯಾಟೆಂಟ್ (India’s Got Latent) ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮಹಾರಾಷ್ಟ್ರ, ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ದಾಖಲಾಗಿರುವ ಎಫ್‌ಐಆರ್‌ಎಸ್ ಅಡಿ ಯೂಟ್ಯೂಬರ್ ರಣವೀರ್ ಅಲಹಬಾದಿಯ (Ranveer Allahabadia) ಬಂಧನಕ್ಕೆ ಸುಪ್ರೀಂಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.

ತನ್ನ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ಮಧ್ಯಂತರ ರಕ್ಷಣೆ ಕೋರಿ ರಣವೀರ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾ ಸೂರ್ಯ ಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಪೀಠ ಪ್ರಕರಣಗಳಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಯಾವುದೇ ಹೊಸ ಪ್ರಕರಣ ದಾಖಲಿಸಿದಂತೆ ನಿರ್ದೇಶಿಸಿ ಬಂಧನಕ್ಕೆ ಮಧ್ಯಂತರ ತಡೆ ನೀಡಿತು.

ಇದೇ ವೇಳೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ ಮತ್ತು ಅಸ್ಸಾಂ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಯಾವುದೇ ಬೆದರಿಕೆಗಳು ಬಂದ ಸಂದರ್ಭದಲ್ಲಿ ರಣವೀರ್ ಮಹಾರಾಷ್ಟ್ರ ಮತ್ತು ಅಸ್ಸಾಂ ಪೊಲೀಸರನ್ನು ಸಂಪರ್ಕಿಸಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ಕೋರಬಹುದು ಎಂದು ಅದು ಹೇಳಿದೆ.  ಇದನ್ನೂ ಓದಿ: ಪೋಷಕರ ಲೈಂಗಿಕ ಕ್ರಿಯೆ ವೀಕ್ಷಿಸುತ್ತೀರಾ? – ಯೂಟ್ಯೂಬರ್‌ ರಣವೀರ್ ಅಲ್ಲಾಬಾದಿಯಾ ಕೀಳು ಹೇಳಿಕೆ, ನೆಟ್ಟಿಗರಿಂದ ಭಾರೀ ಆಕ್ರೋಶ

Supreme Court

ವಿಚಾರಣೆ ವೇಳೆ ಯೂಟ್ಯೂಬರ್ ರಣವೀರ್ ಅವರ ಹೇಳಿಕೆಗೆ ನ್ಯಾ. ಸೂರ್ಯಕಾಂತ್ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? ನೀವು ಯಾವಾಗ ಬೇಕಾದರೂ ನಿಮ್ಮ ಅಸಭ್ಯತೆಯನ್ನು ತೋರಿಸಬಹುದೇ? ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ ಇಂತಹ ನಡವಳಿಕೆಯನ್ನು ಖಂಡಿಸಲೇಬೇಕು ಎಂದು ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ನೀವು ಜನಪ್ರಿಯರಾಗಿದ್ದೀರಿ ಎಂಬ ಕಾರಣಕ್ಕೆ ಸಮಾಜವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಈ ಭಾಷೆಯನ್ನು ಇಷ್ಟಪಡುವವರು ಭೂಮಿಯ ಮೇಲೆ ಯಾರಾದರೂ ಇದ್ದಾರೆಯೇ? ಇಷ್ಟಪಟ್ಟರೇ ಅವರ ಮನಸ್ಸಿನಲ್ಲಿ ಏನೋ ಕೊಳಕಿದೆ ಎಂದರ್ಥ. ನಾವು ನಿಮ್ಮನ್ನು ಯಾಕೆ ರಕ್ಷಿಸಬೇಕು? ನೀವು ಮತ್ತು ನಿಮ್ಮ ಬೆಂಬಲಿಗರು ಈ ಅಧಃಪತನದ ಮಟ್ಟಕ್ಕೆ ಇಳಿದಿದ್ದೀರಿ. ಕಾನೂನು ಮತ್ತು ವ್ಯವಸ್ಥೆಯ ನಿಯಮವನ್ನು ಪಾಲಿಸಬೇಕು ಎಂದು ನ್ಯಾ. ಸೂರ್ಯಕಾಂತ್ ಸೂಚಿಸಿದರು.

ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಪುತ್ರ ಅಭಿನವ್ ಚಂದ್ರಚೂಡ್ ಅವರು ರಣವೀರ್ ಪರ ವಾದ ಮಂಡಿಸಿ, ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಿದರು. ಯೂಟ್ಯೂಬರ್‌ನ ನಾಲಿಗೆ ಕತ್ತರಿಸುವವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಅಭಿನವ್ ಚಂದ್ರಚೂಡ್ ಅವರನ್ನು ತರಾಟೆಗೆ ತೆಗೆದುಕೊಂಡು ಪಾಡ್‌ಕ್ಯಾಸ್ಟರ್ ಬಳಸಿದ ಭಾಷೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿತು. ನೀವು ಜನಪ್ರೀಯತೆಗೆ ಹೇಳಿಕೆ ನೀಡಿದ್ದೀರಿ ಅದೇ ರೀತಿ ಅವರು ಬೆದರಿಕೆ ಮೂಲಕ ಜನಪ್ರಿಯತೆ ಪಡೆಯಲು ಪ್ರಯತ್ನಿಸುತ್ತಿರಬಹುದು ಎಂದು ಹೇಳಿತು.

TAGGED:FIRIndia's Got TalentSupreme Courtಯೂಟ್ಯೂಬ್ರಣವೀರ್ ಅಲಹಬಾದಿಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

Heart Attack 04
Districts

ಹಾಸನ | ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ ನಾಲ್ವರು ಸಾವು – ಸಾವಿನ ಸಂಖ್ಯೆ 31ಕ್ಕೆ ಏರಿಕೆ

Public TV
By Public TV
3 minutes ago
Lily Phillips
Latest

12 ಗಂಟೆಯಲ್ಲಿ 1,113 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

Public TV
By Public TV
12 minutes ago
Lucknow Murder
Crime

ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

Public TV
By Public TV
17 minutes ago
Siddaramaiah 6
Bengaluru City

ಸರ್ಕಾರದಿಂದ ಮತ್ತೊಂದು ಯಡವಟ್ಟು ನಡೆ – ಎಎಸ್‌ಪಿ ಬರಮಣ್ಣಿ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ

Public TV
By Public TV
39 minutes ago
CRIME
Crime

ದೆಹಲಿಯಲ್ಲಿ ಡಬಲ್ ಮರ್ಡರ್ – ಮನೆ ಕೆಲಸದವನಿಂದಲೇ ಕೃತ್ಯ

Public TV
By Public TV
45 minutes ago
BBMP staff caste census stickers without conducting a survey in bengaluru
Bengaluru City

ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?