– ಕಾಂಗ್ರೆಸ್‍ನಲ್ಲಿ ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ
ಮಂಗಳೂರು: ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮೋದಿ ಸರ್ಕಾರ (Narendra Modi Govt) ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (MP Nalin Kumar Kateel) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ (Congress) ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ (Siddaramaiah), ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಪಾಪ ಇನ್ನೂ ಮಗು: ಚಲುವರಾಯಸ್ವಾಮಿ
Advertisement
Advertisement
ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರುತ್ತಾರೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಬರುತ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್‍ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು ಎಂದರು.
Advertisement
ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನ ಆಗ್ತಾ ಇಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದು ಹೇಳಿದರು.
ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ. ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಬರುತ್ತಾರೆ. ಅವರನ್ನು ಮಂಗಳೂರು ಏರ್‍ಪೋರ್ಟ್‍ನಿಂದ ಸ್ವಾಗತ ಮಾಡುತ್ತೇವೆ. ಅಲ್ಲಿಂದ ಮೆರವಣಿಗೆ ಮಾಡಿ ಮಂಗಳೂರಿನ ಸಿ.ವಿ ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ಇರಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಎಂದು ಕಟೀಲ್ ತಿಳಿಸಿದರು.