ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಹೊಳೆನರಸೀಪುರದ (Holenarasipur) ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಆಕಾಶ್ (31) ಎಂದು ಗುರುತಿಸಲಾಗಿದೆ. ಓವರ್ ಹೆಡ್ ಟ್ಯಾಂಕ್‍ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮೇಲೆ ನಿಂತು ಅವರು ಪೈಂಟ್ ಮಾಡುತ್ತಿದ್ದರು. ಈ ವೇಳೆ, ಕಬ್ಬಿಣದ ರಾಡ್ ಮುರಿದಿದೆ. ಈ ವೇಳೆ ಟ್ಯಾಂಕ್ ಮೇಲಿನಿಂದ ಅವರು ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಚನ್ನಗಿರಿ | ನಿರ್ಮಾಣ ಹಂತದ ಕಟ್ಟಡದ ತೊಟ್ಟಿಗೆ ಬಿದ್ದು ಬಾಲಕ ಸಾವು
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ – ಟೆಕ್ಕಿ ಬಂಧನ

