ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ (Elephant Attack) ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ. ಆನೆ ದಾಳಿಯಿಂದ ಕಾರ್ಮಿಕ ಪ್ರಜ್ಞೆ ಕಳೆದುಕೊಂಡಿದ್ದು, ಗಂಭಿರ ಸ್ಥಿತಿಯಲ್ಲಿದ್ದಾರೆ. ಎಡಗೈ ಮಾತ್ರ ನಡುಗುತ್ತಿದ್ದು, ಬಾಳೆಹೊನ್ನೂರು (Balehonnuru) ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತೋಟದಲ್ಲೇ ಮೂರು ಕಾಡಾನೆಗಳು ಬೀಡು ಬಿಟ್ಟಿದ್ದು, ಗ್ರಾಮಸ್ಥರು ಆನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವರ ಮನವಿ; ಆನೆ ದಾಳಿಯಿಂದ ಸಾವು – ಈಶ್ವರ ಖಂಡ್ರೆ ಶೋಕ

