ನವದೆಹಲಿ: ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?:
ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದ ಮೇಲೆ. ಭಾರತೀಯ ಕ್ರೀಡೆಗೆ ಇದೊಂದು ವಿಶೇಷ ಕ್ಷಣ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ
Advertisement
Advertisement
ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಕ್ಷಣಾ ಸಚಿವ ರಜನಾಥ್ ಸಿಂಗ್, ಬಸವರಾಜ ಬೊಮ್ಮಾಯಿ, ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗಾಯಗೊಂಡ ರವೀಂದ್ರ ಜಡೇಜಾ – ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅಮಿರ್ ಅಲಿ
Advertisement
ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ನೀರಜ್ ಚೋಪ್ರಾ ಬೆಳ್ಳಿ ಪದಕದೊಂದಿಗೆ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆದ್ದ ಮೊದಲ ಪುರುಷ ಸ್ಪರ್ಧಿ, ದೇಶದ ಎರಡನೇ ಕ್ರೀಡಾಪಟು ಎಂಬ ಹಗ್ಗಳಿಕೆ ಪಾತ್ರರಾಗಿದ್ದಾರೆ.
A great accomplishment by one of our most distinguished athletes!
Congratulations to @Neeraj_chopra1 on winning a historic Silver medal at the #WorldChampionships. This is a special moment for Indian sports. Best wishes to Neeraj for his upcoming endeavours. https://t.co/odm49Nw6Bx
— Narendra Modi (@narendramodi) July 24, 2022
ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.