ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪುರುಷರ ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ ಮತ್ತು ಜಾವೆಲಿನ್ ಥ್ರೋನಲ್ಲಿ ರೋಹಿತ್ ಯಾದವ್ ಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.
Advertisement
ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ 16.68 ಮೀ. ಹಾರುವ ಮೂಲಕ ಫೈನಲ್‍ಗೆ ಗ್ರೂಪ್ A ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಎಂಟ್ರಿಕೊಟ್ಟರೆ, ಜಾವಲಿನ್ ಥ್ರೋನಲ್ಲಿ ರೋಹಿತ್ ಯಾದವ್ 80.42 ಮೀ. ಎಸೆದು ಗ್ರೂಪ್ B ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಫೈನಲ್‍ಗೆ ತೇರ್ಗಡೆಗೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್- ಫೈನಲ್‌ಗೆ ನೀರಜ್ ಚೋಪ್ರಾ
Advertisement
Advertisement
ಈ ಮೊದಲು ಜಾವೆಲಿನ್ ಎಸೆತದಲ್ಲಿ ಒಲಿಂಪಿಕ್ಸ್‌ನ ಚಿನ್ನದ ಹುಡುಗ ನೀರಜ್ ಚೋಪ್ರಾ 88.39 ಮೀ. ಎಸೆದು ಕೂಟದ ಗ್ರೂಪ್ A ವಿಭಾಗದಲ್ಲಿ ಮೊದಲನೇ ಸ್ಪರ್ಧಿಯಾಗಿ ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಈ ಮೂಲಕ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಒಂದೇ ದಿನ ಭಾರತದ ಮೂವರು ಆಟಗಾರರು ಫೈನಲ್‍ಗೆ ಲಗ್ಗೆ ಇಟ್ಟು ಪದಕ ನಿರೀಕ್ಷೆ ಹುಟ್ಟಿಸಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ ಕೊರೊನಾ ಪಾಸಿಟಿವ್ – ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಔಟ್?
Advertisement
39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ಪದಕ ಗೆದ್ದಿದ್ದು 1 ಬಾರಿ ಮಾತ್ರ 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ಮತ್ತೆ ಭಾರತದ ಕ್ರೀಡಾಪಟುಗಳು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ.