ಚೆನ್ನೈ: ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ (World Chess Champion) ಹೆಗ್ಗಳಿಕೆಗೆ ಪಾತ್ರರಾದ ಡಿ.ಗುಕೇಶ್ (D.Gukesh) ಭಾರತಕ್ಕೆ ಮರಳಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) ಭರ್ಜರಿ ಸ್ವಾಗತ ಸಿಕ್ಕಿತು.
ಇತ್ತೀಚಿಗಷ್ಟೇ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವದ ಕಿರಿಯ ಚೆಸ್ ಚಾಂಪಿಯನ್ ಎಂಬ ಇತಿಹಾಸ ನಿರ್ಮಿಸಿದರು.ಇದನ್ನೂ ಓದಿ: ವಿವಾದದ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ 1409 ಕೋಟಿ ಬಾಚಿದ ‘ಪುಷ್ಪ 2’
Advertisement
Advertisement
ಇಂದು (ಡಿ.16) ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಧಿಕಾರಿಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.
Advertisement
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಧನೆಯ ಬಳಿಕ ಮರಳಿ ಭಾರತಕ್ಕೆ ಬಂದಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲವೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತೋಷ ವ್ಯಕ್ತಪಡಿಸಿದರು.
Advertisement
ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. 18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವ್ ಚಾಂಪಿಯನ್‌ಶಿಪ್‌ನ ಕೊನೆಯ 14ನೇ ನಿರ್ಣಾಯಕ ಪಂದ್ಯದಲ್ಲಿ 6.5-6.5 ಸಮಬಲಗೊಂಡು, ಬಳಿಕ 7.5-6.5 ಅಂಕಗಳೊಂದಿಗೆ ಗುಕೇಶ್ ಗೆಲುವು ಸಾಧಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು.ಇದನ್ನೂ ಓದಿ: ಭಾರತ-ಆಸೀಸ್ ಮೂರನೇ ಟೆಸ್ಟ್‌ಗೆ ಮಳೆ ಕಾಟ – ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 51 ರನ್‌ಗೆ 4 ವಿಕೆಟ್