ಮ್ಯಾಂಚೆಸ್ಟರ್: ವರುಣನಿಂದ 46.4 ಓವರ್ ನಲ್ಲಿ ನಿಂತಿದ್ದ ಪಂದ್ಯ ಮತ್ತೆ ಪುನಾರಂಭಗೊಂಡಿತು. ಬ್ರೇಕ್ ಪಡೆದ ನಾಯಕ ವಿರಾಟ್ ಬಿರುಸಿನ ಆಟಕ್ಕೆ ಮುಂದಾದರು, ಆದರೆ 77 ರನ್ ಗಳಿಸಿದ ಕೊಹ್ಲಿ 47.4 ಓವರ್ ನಲ್ಲಿ ಸರ್ಫರಾಜ್ ಗೆ ಕ್ಯಾಚ್ ನೀಡುವ ಮೂಲಕ ಔಟ್ ಆದರು. ವಿಜಯ್ ಶಂಕರ್ ಜೊತೆ ಸೇರಿಕೊಂಡ ಕೇದಾರ ಜಾಧವ್ ಎಚ್ಚರಿಕೆಯ ಆಟಕ್ಕೆ ಮುಂದಾದರು. ಅಂತಿಮವಾಗಿ ಟೀಂ ಇಂಡಿಯಾ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿ ಪಾಕಿಸ್ತಾನಕ್ಕೆ 337 ರನ್ ಗಳ ಗುರಿ ನೀಡಿತು.
ಕೊಹ್ಲಿ ವಿಶ್ವ ದಾಖಲೆ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದು, ಪಂದ್ಯದಲ್ಲಿ 57 ರನ್ ಗಳಿಸಿದ ಸಂದರ್ಭದಲ್ಲಿ ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 11 ಸಾವಿರ ರನ್ ಗಳಿಸಿದ ದಾಖಲೆ ಬರೆದರು.
Advertisement
Advertisement
ಕೊಹ್ಲಿ 222 ಇನ್ನಿಂಗ್ಸ್ ಗಳಲ್ಲೇ ಈ ಸಾಧನೆ ಮಾಡಿದ್ದು, ಈ ಹಿಂದೆ ಸಚಿನ್ 276 ಇನ್ನಿಂಗ್ಸ್ ಗಳಲ್ಲಿ 11 ಸಾವಿರ ರನ್ ಗಳಿಸಿದ್ದರು. ಏಕದಿನ ಕ್ರಿಕೆಟ್‍ನಲ್ಲಿ ಕೊಹ್ಲಿ 11 ಸಾವಿರ ರನ್ ಪೂರ್ಣಗೊಳಿಸಿದ 9ನೇ ಆಟಗಾರ ಎಂಬ ಹೆಗ್ಗಳಿಕೆಯನ್ನ ಪಡೆದಿದ್ದು, ಭಾರತ ಪರ ಈ ಸಾಧನೆ ಮಾಡಿ 3ನೇ ಆಟಗಾರ ಎನಿಸಿಕೊಂಡಿದ್ದಾರೆ.
Advertisement
ಟೀಂ ಇಂಡಿಯಾ ಪರ ಇದುವರೆಗೂ ಸಚಿನ್, ಗಂಗೂಲಿ 11 ಸಾವಿರ ರನ್ ಪೂರೈಸಿದ್ದಾರೆ. ಸಚಿನ್ ಏಕದಿನ ಕ್ರಿಕೆಟಿನಲ್ಲಿ 18,426 ರನ್ ಸಿಡಿಸಿದ್ದರೆ, ಗಂಗೂಲಿ 11,363 ರನ್ ಗಳಿಸಿದ್ದರೆ. ಉಳಿದಂತೆ ರಿಕಿ ಪಾಟಿಂಗ್ 286 ಇನ್ನಿಂಗ್ಸ್, ಸೌರವ್ ಗಂಗೂಲಿ 288 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು.
Advertisement
ಕೊಹ್ಲಿ ಈಗಾಗಲೇ ವೇಗವಾಗಿ 10 ಸಾವಿರ ರನ್ ಸಿಡಿಸಿದ ಸಾಧನೆ ಮಾಡಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೇ ಈ ಸಾಧನೆ ಮಾಡುವ ಅವಕಾಶದಿಂದ ವಂಚಿತರಾಗಿದ್ದರು. ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ 51ನೇ ಅರ್ಧ ಶತಕ ಸಿಡಿಸಿದ ಕೊಹ್ಲಿ, ಈ ಟೂರ್ನಿಯಲ್ಲಿ ಸಿಡಿಸಿದ 2ನೇ ಅರ್ಧ ಶತಕ ಇದಾಗಿದೆ.
ರೋ’ಹಿಟ್’: ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಅಜೇಯ 122 ರನ್ ಹಾಗೂ ಆಸ್ಟ್ರೇಲಿಯಾ ವಿರುದ್ಧ 57 ರನ್ ಗಳಿಸಿದ್ದ ರೋಹಿತ್ ಶರ್ಮಾ ಪಾಕಿಸ್ತಾನದ ವಿರುದ್ಧವೂ ಭರ್ಜರಿ ಬ್ಯಾಟಿಂಗ್ ನಡೆಸಿದರು. 34 ಎಸೆತಗಳಲ್ಲೇ 50 ರನ್ ಪೂರೈಸಿದ ರೋಹಿತ್ 85 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಆ ಮೂಲಕ ವೃತ್ತಿಯ 24ನೇ ಶತಕ, 2019ರ ಟೂನಿಯಲ್ಲಿ 2ನೇ ಶತಕ ಸಿಡಿಸಿದರು. ಸಚಿನ್ (6), ಗಂಗೂಲಿ (5) ಮತ್ತು ಶಿಖರ್ ಧವನ್ (3) ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಆಟಗಾರರಾಗಿದ್ದಾರೆ.