ಲಂಡನ್: ಅಂಪೈರ್ ಬಳಿ ಓವರ್ ಥ್ರೋ ರನ್ ರದ್ದು ಮಾಡಿ ಎಂದು ಬೆನ್ ಸ್ಟೋಕ್ಸ್ ಮನವಿ ಮಾಡಿದ್ದರು ಎಂದು ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಅಂಡರ್ಸನ್ ಹೇಳಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 241 ರನ್ ಬೆನ್ನಟ್ಟಿದ ಇಂಗ್ಲೆಂಡ್ ಇನ್ನಿಂಗ್ಸ್‍ನ ಕೊನೆಯ ಓವರ್ ನಲ್ಲಿ ಬೆನ್ ಸ್ಟೋಕ್ಸ್ ಡೀಪ್ ಮಿಡ್ ವಿಕೆಟ್ ಕಡೆಗೆ ಬಾಲನ್ನು ತಳ್ಳಿ ಎರಡು ರನ್ ಓಡಲು ಮುಂದಾದರು. ಈ ಸಮಯದಲ್ಲಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಕಿವೀಸ್‍ನ ಮಾರ್ಟಿನ್ ಗುಪ್ಟಿಲ್ ಚೆಂಡನ್ನು ಹಿಡಿದು ವಿಕೆಟ್ ಕೀಪರ್ ಕಡೆಗೆ ಎಸೆದಿದ್ದರು.
Advertisement
Advertisement
ಹೀಗೆ ಎಸೆದ ಚೆಂಡು ಎರಡು ರನ್ ಕದಿಯುವ ಯತ್ನದಲ್ಲಿ ಡೈವ್ ಹೊಡೆದ ಬೆನ್ ಸ್ಟೋಕ್ಸ್ ಅವರ ಬ್ಯಾಟ್‍ಗೆ ತಗಲಿ ಬೌಂಡರಿ ಸೇರಿತ್ತು. ನಂತರ ಈ ರನ್ ಬಗ್ಗೆ ಚರ್ಚೆ ನಡೆಸಿದ ಅನ್ ಫೀಲ್ಡ್ ಅಂಪೈರ್ ಗಳಾದ ಮಾರೈಸ್ ಎರಾಸ್ಮಸ್ ಮತ್ತು ಕುಮಾರ್ ಧರ್ಮಸೇನಾ ಅವರು ಇಂಗ್ಲೆಂಡ್‍ಗೆ ಆರು ರನ್ ನೀಡಿದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ಈ ವಿಚಾರವಾಗಿ ಮಾತನಾಡಿರುವ ಜೇಮ್ಸ್ ಅಂಡರ್ಸನ್ ಬೆನ್ ಸ್ಟೋಕ್ಸ್ ಘಟನೆ ನಡೆದ ತಕ್ಷಣವೇ ಅಂಪೈರ್ ಬಳಿ ಕ್ಷಮೆಯಾಚಿಸಿದ್ದರು. ತಮ್ಮ ನಿರ್ಧಾರವನ್ನು ರದ್ದುಗೊಳಿಸುವಂತೆ ಅಂಪೈರ್ ಗಳಿಗೆ ಮನವಿ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.
ಅಪೈರ್ ಅವರು ನೀಡಿದ ತೀರ್ಮಾನವನ್ನು ಸಮರ್ಥನೆ ಮಾಡಿಕೊಂಡಿರುವ ಜೇಮ್ಸ್ ಅಂಡರ್ಸನ್ ಥ್ರೋ ಮಾಡಿದಾಗ ಬಾಲು ಬ್ಯಾಟ್‍ಗೆ ಬಡಿದು ಅದು ಬೌಂಡರಿಗೆ ಹೋದರೆ ನಿಯಮಗಳ ಪ್ರಕಾರ ಅದು ಫೋರ್ ಎಂದೇ ಪರಿಗಣಿಸಲಾಗುತ್ತದೆ. ಅದಕ್ಕೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.
ಅಂಪೈರ್ ನಿರ್ಣಯದ ಬಗ್ಗೆ ಸೋಮವಾರವೇ ಪ್ರತಿಕ್ರಿಯೆ ನೀಡಿದ್ದ ಆಸ್ಟ್ರೇಲಿಯಾದ ಖ್ಯಾತ ಮಾಜಿ ಅಂಪೈರ್ ಸೈಮನ್ ಟಫೆಲ್ ಅವರು, ಫೈನಲ್ ಪಂದ್ಯದಲ್ಲಿ ಆನ್ ಫೀಲ್ಡ್ ಅಂಪೈರ್ ಗಳು ಓವರ್ ಥ್ರೋ ಕಾರಣಕ್ಕೆ 6 ರನ್ ನೀಡಿದ್ದು ತಪ್ಪು. ನಿಯಮಗಳ ಅನ್ವಯ ಅಲ್ಲಿ 5 ರನ್ ಮಾತ್ರ ನೀಡಬೇಕಿತ್ತು ಎಂದು ಹೇಳಿದ್ದರು.
ಓವರ್ ಥ್ರೋ ಕುರಿತು ಫಾಕ್ಸ್ ನ್ಯೂಸ್‍ಗೆ ಪ್ರತಿಕ್ರಿಯೆ ನೀಡಿದ್ದ ಐಸಿಸಿಯ ವಕ್ತಾರರು, ಮೈದಾನದಲ್ಲಿರುವ ಅಂಪೈರ್ ಗಳು ಐಸಿಸಿಯ ನಿಯಮಗಳ ಪುಸ್ತಕವನ್ನು ಆಧಾರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಅಂಪೈರ್ ಗಳು ತೆಗೆದುಕೊಳ್ಳುವ ಈ ತೀರ್ಮಾನಗಳ ಬಗ್ಗೆ ನಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದರು.
ಕಾನೂನು ಏನು ಹೇಳುತ್ತೆ?
ಓವರ್ ಥ್ರೋಗೆ ಸಂಬಂಧಿಸಿದ ಐಸಿಸಿಯ 19.8 ಕಾನೂನು ಪ್ರಕಾರ ಫೀಲ್ಡರ್ ಎಸೆದ ಬಾಲ್ ಓವರ್ ಥ್ರೋ ಅಥವಾ ಉದ್ದೇಶಪೂರ್ವಕವಾಗಿ ಬಾಲ್ ಎಸೆದಾಗ ಇಬ್ಬರು ಬ್ಯಾಟ್ಸ್ ಮನ್ ಗಳು ಪಿಚ್ ಮಧ್ಯದಲ್ಲಿ ಒಬ್ಬರನ್ನೊಬ್ಬರು ದಾಟಿದ್ದರೆ ಮಾತ್ರ ರನ್ ಪರಿಗಣಿಸಬೇಕು.
ವಿವಾದ ಏನು?
ಗುಪ್ಟಿಲ್ ಚೆಂಡನ್ನು ಎಸೆಯುವ ವೇಳೆ ಸ್ಟೋಕ್ಸ್ ಹಾಗೂ ಆದಿಲ್ ರಶೀದ್ ಒಬ್ಬರನ್ನೊಬ್ಬರನ್ನು ದಾಟಿರಲಿಲ್ಲ. ಎರಡನೇ ರನ್ ಪೂರ್ಣಗೊಳಿಸುವ ಸಂದರ್ಭದಲ್ಲಿ ಬಾಲ್ ಬ್ಯಾಟಿಗೆ ಬಡಿದ ಕಾರಣ ಚೆಂಡು ಬೌಂಡರಿಗೆ ಹೋಗಿದೆ. ಈ ಕಾರಣಕ್ಕೆ ಎರಡನೇಯ ರನ್ ಪರಿಗಣಿಸಬಾರದು. ಆದರೆ ಬೌಂಡರಿ ಜೊತೆಗೆ 2 ರನ್ ನೀಡಿದ ಪರಿಣಾಮ ಪಂದ್ಯ ಟೈ ಆಗಿದೆ. 5 ರನ್ ಮಾತ್ರ ನೀಡಿದ್ದರೆ ನ್ಯೂಜಿಲೆಂಡ್ ಜಯಗಳಿಸುತಿತ್ತು ಎಂದು ಕ್ರಿಕೆಟ್ ಅಭಿಮಾನಿಗಳು ವಾದಿಸುತ್ತಿದ್ದಾರೆ.