ಲಂಡನ್: ವಿಶ್ವಕಪ್‍ನಲ್ಲಿ ನಾಳೆ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ ಕಿತ್ತಳೆ ಬಣ್ಣದ ಜರ್ಸಿ ತೊಟ್ಟು ಆಡಲಿದೆ.
ಹೊಸ ಜರ್ಸಿ ತೊಟ್ಟ ಟೀಂ ಇಂಡಿಯಾ ಆಟಗಾರರ ಫೋಟೋವನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೊಸ ಜರ್ಸಿ ತೊಟ್ಟು ಆಟಗಾರು ಪೋಸ್ ನೀಡಿರುವ ಫೋಟೋಗಳು ತುಂಬಾ ವೈರಲ್ ಆಗಿವೆ.
Advertisement
Presenting #TeamIndia's Away Jersey ???????????????????????? What do you make of this one guys? #TeamIndia #CWC19 pic.twitter.com/TXLuWhD48Q
— BCCI (@BCCI) June 28, 2019
Advertisement
ಹೊಸ ಜರ್ಸಿತೊಟ್ಟ ತಮ್ಮ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಭಾರತದ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರು “ಹೊಸ ಜರ್ಸಿಯಲ್ಲಿ ಮಿಂಚಲು ಸಿದ್ಧ” ಎಂದು ಬರೆದಿದ್ದಾರೆ. ಇನ್ನೂ ಕೆ.ಎಲ್ ರಾಹುಲ್ ಜೊತೆ ಹಿಮ್ಮುಖವಾಗಿ ಪೋಸ್ ನೀಡಿ ಫೋಟೋ ಹಾಕಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಹೊಸ ಜರ್ಸಿಯಲ್ಲಿ ಮುಂದಿನ ಪಂದ್ಯಕ್ಕೆ ರೆಡಿ ಎಂದು ಬರೆದುಕೊಂಡಿದ್ದಾರೆ.
Advertisement
Ready to rumble in new jersey. #TeamIndia ???????? pic.twitter.com/jW2tyKH8Xe
— Yuzvendra Chahal (@yuzi_chahal) June 28, 2019
Advertisement
ಎಂ.ಎಸ್ ಧೋನಿ, ಬೌಲರ್ ಭುವನೇಶ್ವರ್ ಕುಮಾರ್, ಕೇದಾರ್ ಜಾಧವ್ ಮತ್ತು ದಿನೇಶ್ ಕಾರ್ತಿಕ್ ಅವರ ಫೋಟೋವನ್ನು ಬಿಸಿಸಿಐ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದೆ. ಅದರಂತೆ ಐಸಿಸಿ ಕೂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ವಿಶೇಷ ಸಮಯದಲ್ಲಿ ವಿಶೇಷ ಜರ್ಸಿ, ಇಂಡಿಯಾ ಈ ಜರ್ಸಿಯನ್ನು ಧರಿಸಿ ಇಂಗ್ಲೆಂಡ್ ವಿರುದ್ಧ ಆಡಲಿದೆ ಎಂದು ಬರೆದುಕೊಂಡಿದೆ.
https://www.instagram.com/p/BzQzO8EArLx/
ಹೊಸ ಜರ್ಸಿ ಯಾಕೆ?
ಐಸಿಸಿ ನಿಯಮದಂತೆ 2 ತಂಡಗಳು ಒಂದೇ ಬಣ್ಣದ ಜರ್ಸಿ ಧರಿಸುವಂತಿಲ್ಲ. ಎರಡೂ ತಂಡಗಳು ಒಂದೇ ವರ್ಣದ ಜರ್ಸಿ ತೊಟ್ಟು ಮೈದಾನಕ್ಕೆ ಇಳಿದರೆ ಪ್ರೇಕ್ಷಕರಿಗೆ ಗೊಂದಲ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಒಂದು ತಂಡವು ತನ್ನ ಜರ್ಸಿಯನ್ನು ಬದಲಾಯಿಸಬೇಕಾಗುತ್ತದೆ.
Special occasion, special kit ???? #TeamIndia will wear this in their #OneDay4Children game against England on Sunday. #OD4C | #ENGvIND | #CWC19 pic.twitter.com/ZvuX4be37F
— ICC (@ICC) June 29, 2019
ಫುಟ್ಬಾಲ್‍ನಲ್ಲಿರುವ `ಹೋಮ್’ ಮತ್ತು `ಅವೇ’ ನಿಯಮವನ್ನು ಕ್ರಿಕೆಟ್‍ಗೆ ಅಳವಡಿಸಲಾಗಿದೆ. ಈ ನಿಯಮದ ಪ್ರಕಾರ ಅತಿಥೇಯ ತಂಡ ಇಂಗ್ಲೆಂಡ್ ತನ್ನದೇ ಜರ್ಸಿಯನ್ನು ತೊಟ್ಟು ಆಡಲಿದ್ದು, ಕೊಹ್ಲಿ ಪಡೆ ಬೇರೆ ಬಣ್ಣದ ಜರ್ಸಿ ಧರಿಸಬೇಕಿದೆ. ಹೀಗಾಗಿ ಭಾರತ ನೀಲಿಯ ಬದಲು ಕೇಸರಿ ಬಣ್ಣ ಇರುವ ಜರ್ಸಿಯನ್ನು ಧರಿಸಲಿದೆ.
ವಿಪಕ್ಷಗಳಿಂದ ಟೀಕೆ:
ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಕೇಸರಿ ಬಣ್ಣದ ಜರ್ಸಿಗೆ ಆಕ್ಷೇಪ ಎತ್ತಿದೆ. ಈ ಬಗ್ಗೆ ಅಸಮಾಧಾನ ಹೊರ ಹಾಕಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರು, ಬಿಸಿಸಿಐ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕೇಸರಿಮಯವಾಗಿಸಲು ಹೊರಟಿದ್ದಾರೆ. ಭಾರತದ ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ್ದು ಒಬ್ಬ ಮುಸ್ಲಿಂ. ತ್ರಿವರ್ಣ ಧ್ವಜದ ಮೂರು ಬಣ್ಣಗಳಲ್ಲಿ ಕೇಸರಿಯನ್ನೇ ಆಯ್ಕೆ ಮಾಡಿದ್ದು ಯಾಕೆ? ಜರ್ಸಿಯಲ್ಲಿ ಮೂರು ವರ್ಣಗಳನ್ನು ಬಳಸಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Fixed it ???????? pic.twitter.com/m9bcV8doP0
— Ashutosh Singh (@ashusarcastic) June 28, 2019
ಈ ಹೇಳಿಕೆಗಳಿಗೆ ತಿರುಗೇಟು ನೀಡಿದ ಟೀಂ ಇಂಡಿಯಾ ಅಭಿಮಾನಿಗಳು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಭಾರತದ ಫುಟ್‍ಬಾಲ್ ಮತ್ತು ಹಾಕಿ ಆಟಗಾರರು ಕೇಸರಿ ಬಣ್ಣದ ಜರ್ಸಿಯಲ್ಲಿ ಆಡಿದ್ದಾರೆ. ಈ ವೇಳೆ ಆಕ್ಷೇಪ ಎತ್ತದ ರಾಜಕೀಯ ನಾಯಕರು ಈಗ ಪ್ರಚಾರಕ್ಕಾಗಿ ವಿವಾದವನ್ನು ಎತ್ತಿದ್ದಾರೆ ಎಂದು ಟೀಕಿಸಿದ್ದಾರೆ.