ಅಹಮದಾಬಾದ್: ಏಕದಿನ ವಿಶ್ವಕಪ್ (World Cup 2023) ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ – ಪಾಕಿಸ್ತಾನ ಪಂದ್ಯಕ್ಕೆ (Ind vs Pak) ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಟ್ವಿಟ್ಟರ್‌ನಲ್ಲೂ ಟ್ರೆಂಡ್ ಅಲೆ ಎದ್ದಿದೆ.
ಹೌದು. ಇದೇ ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ ಪಾಕ್ ಉಗ್ರರನ್ನು ಮಟ್ಟ ಹಾಕಿದ್ದ NSG ಕಮಾಂಡೋಗಳನ್ನು ಈ ಪಂದ್ಯಕ್ಕೆ ಭದ್ರತೆಗಾಗಿ ನಿಯೋಜಿಸಲಾಗಿದೆ.
Advertisement
Advertisement
ಗುಜರಾತ್ ಪೊಲೀಸ್, ಎನ್ಎಸ್ಜಿ, ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಮತ್ತು ಗೃಹರಕ್ಷರು ಸೇರಿದಂತೆ ವಿವಿಧ ಏಜೆನ್ಸಿಗಳ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಕಾಂಗ್ರೆಸ್‌ನವರು ಬೈದಿದ್ದಕ್ಕೆ ಪ್ರದೀಪ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋದು: ಸುಧಾಕರ್
Advertisement
ಕಳೆದ 20 ವರ್ಷಗಳಲ್ಲಿ ಅಹಮದಾಬಾದ್ ನಗರದಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ತಿಳಿಸಿದ್ದಾರೆ.
Advertisement
ಇದಕ್ಕೂ ಮುನ್ನ ಗುಜರಾತ್ ಸಿಎಂ ಭೂಪೇಂದ್ರಬಾಯ್ ಪಟೇಲ್ ಅವರು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ರಾಜ್ಯ ಡಿಜಿಪಿ ವಿಕಾಸ್ ಸಹಾಯ್, ಜಿ.ಎಸ್ ಮಲಿಕ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗಾಂಧಿನಗರದಲ್ಲಿ ಸಭೆ ನಡೆಸಿ ಪೊಲೀಸರ ಪ್ಲ್ಯಾನ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಇಂಡೋ ಪಾಕ್ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್
ಮೋದಿ ಕ್ರೀಡಾಂಗಣದಲ್ಲಿ 1.32 ಲಕ್ಷ ಆಸನಗಳ ವ್ಯವಸ್ಥೆಯಿದ್ದು, ಪ್ರತಿಯೊಬ್ಬ ಪ್ರೇಕ್ಷಕರ ಚಲನವಲನಗಳ ಮೇಲೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೇ ಇತ್ತೀಚೆಗೆ ಮುಂಬೈ ಪೊಲೀಸರಿಗೆ ಬಂದಿದ್ದ ಇಮೇಲ್ ಬೆದರಿಕೆ ಸಂದೇಶಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನ ನಿಯೋಜನೆ ಮಾಡಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರಿದ್ದ ಕಾರನ್ನು ಬೆನ್ನಟ್ಟಿ ಬೈಕ್ ಓಡಿಸುತ್ತಲೇ ಗುಂಡು ಹಾರಿಸಿದ ಇಸ್ರೇಲ್ ಪೊಲೀಸ್ – ರೋಚಕ ದೃಶ್ಯದ ವೀಡಿಯೋ ವೈರಲ್
7,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯೊಂದಿಗೆ, ಕ್ರೀಡಾಂಗಣದ ಭದ್ರತೆಗಾಗಿ ಮತ್ತು ಪಂದ್ಯದ ಸಮಯದಲ್ಲಿ ನಗರದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸುಮಾರು 4,000 ಗೃಹರಕ್ಷಕರನ್ನು ನಿಯೋಜಿಸಲಾಗುವುದು. ಈ ಸಿಬ್ಬಂದಿಯ ಜೊತೆಗೆ ನಾವು ಮೂರು ‘ಹಿಟ್ ತಂಡಗಳು’ ಮತ್ತು ಎನ್ಎಸ್ಜಿಯು ಒಂದು ಡ್ರೋನ್ ತಡೆ ತಂಡವನ್ನು ನಿಯೋಜಿಸುತ್ತೇವೆ. ನಮ್ಮ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ 9 ತಂಡಗಳನ್ನು ಸಹ ಬಳಸಿಕೊಳ್ಳಲಾಗುತ್ತದೆ. ಅಷ್ಟೇ ಅಲ್ಲದೇ ಇನ್ಸ್‌ಪೆಕ್ಟರ್ ಜನರಲ್ ಮತ್ತು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಶ್ರೇಣಿಯ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ಮತ್ತು 21 ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಶ್ರೇಣಿಯ ಅಧಿಕಾರಿಗಳು ಪಂದ್ಯದ ದಿನದಂದು ಸಿಬ್ಬಂದಿ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
“ರಾಜ್ಯ ಮೀಸಲು ಪೊಲೀಸ್ (SRP) ಯ 13 ತುಕಡಿಗಳಲ್ಲದೆ, ನಮ್ಮ ಭದ್ರತಾ ವ್ಯವಸ್ಥೆಯ ಭಾಗವಾಗಿ ನಾವು ಕ್ಷಿಪ್ರ ಕ್ರಿಯಾ ಪಡೆಯ ಮೂರು ತುಕಡಿಗಳನ್ನು ನಿಯೋಜಿಸುತ್ತೇವೆ. ಆರ್ ಎಎಫ್ ನಗರದ ಕೋಮು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಿದೆ. ಕಾಲ್ತುಳಿತದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು, ನಾವು ಈಗಾಗಲೇ ಸ್ಥಳಾಂತರಿಸುವ ಯೋಜನೆಯನ್ನು ಸಿದ್ಧಪಡಿಸಿದ್ದೇವೆ ಮತ್ತು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸವೂ ನಡೆಯುತ್ತಿದೆ ಎಂದು ಮಲಿಕ್ ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೇ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನ ಬಿಡುಗಡೆ ಮಾಡಬೇಕು, ಜೊತೆಗೆ 500 ಕೋಟಿ ರೂ. ನೀಡಬೇಕು. ಇಲ್ಲವಾದರೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲಾಗುವುದು. ಅಷ್ಟೇ ಅಲ್ಲದೇ ಅಹಮದಾಬಾದ್‌ನ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಮುಂಬೈ ಪೊಲೀಸರಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು.
Web Stories