ಅಹಮದಾಬಾದ್: ವಿಶ್ವಕಪ್ (World Cup) ಟೂರ್ನಿಯ ರೋಚಕ ಇಂಡೋ-ಪಾಕ್ (Ind vs Pak) ಸಮರಕ್ಕೆ ಕ್ಷಣಗಣನೆ ಬಾಕಿಯಿದೆ. ಮಧ್ಯಾಹ್ನ 2 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆರಂಭವಾಗಲಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬಂದಿದೆ. ಎಲ್ಲ ಟಿಕೆಟ್ಗಳು ಕೂಡ ಸೋಲ್ಡ್ ಔಟ್ ಆಗಿದ್ದು, ಟಿಕೆಟ್ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.
#WATCH | Gujarat: Cricket fans throng Narendra Modi stadium in Ahmedabad ahead of the India Vs Pakistan match today#INDvsPAK pic.twitter.com/cZtbrhEenT
— ANI (@ANI) October 14, 2023
Advertisement
ಇನ್ನೇನು ಕೆಲವೇ ಗಂಟೆಗಳಲ್ಲಿ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್ ಗಾಯಕರಾದ ಶಂಕರ್ ಮಹಾದೇವನ್, ಸುಖ್ವಿಂದರ್ ಸಿಂಗ್, ಅರ್ಜಿತ್ ಸಿಂಗ್ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್‌ಗೆ ಆಗಮಿಸಿದ್ದಾರೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?
Advertisement
Sea of Indian fans at Narendra Modi Stadium.
– Madness…..!!!!!!pic.twitter.com/hOq9J5BftC
— Johns. (@CricCrazyJohns) October 14, 2023
Advertisement
ಟೀಂ ಇಂಡಿಯಾ ಗೆಲುವಿಗೆ ಹೋಮ, ಹವನ:
ಪ್ರತಿಬಾರಿ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರೀ ಕಟ್ಟೆಚ್ಚರ ವಹಿಸಿದ್ದು, ಗುಜರಾತ್ ಪೊಲೀಸ್, ಎನ್ಎಸ್ಜಿ, ಆರ್‌ಎಎಫ್, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ: Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ
Advertisement
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.
#WATCH | Team India arrives at Narendra Modi Stadium in Ahmedabad, Gujarat.
India will face Pakistan in the 12th match of #ICCCricketWorldCup23 here, today. pic.twitter.com/NlynPikv0T
— ANI (@ANI) October 14, 2023
2016ರಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್ ಈಡನ್ ಗಾರ್ಡನ್‌ನಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್ ತಂಡ ನೀಡಿದ್ದ 119 ರನ್‌ಗಳ ಗುರಿಯನ್ನು 18 ಓವರ್‌ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್‌ಗಳಲ್ಲೇ ಈ ಗುರಿ ಪೂರೈಸಿತ್ತು. ಇದೀಗ 7 ವರ್ಷಗಳ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿರುವ ಪಾಕ್ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಇದನ್ನೂ ಓದಿ: ಇಂಡೋ-ಪಾಕ್ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ
ಚಿಕ್ಕಬಳ್ಳಾಪುರ ಚೌಡೇಶ್ವರಿಗೆ ವಿಶೇಷ ಪೂಜೆ: ಪಾಕ್ ವಿರುದ್ಧ ಭಾರತ ಜಯ ಸಾಧಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಚೌಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೌಡೇಶ್ವರಿ ದೇವಿ ಬಳಿ ಭಾರತ ಧ್ವಜ ಇಟ್ಟು ಪೂಜೆ ಮಾಡಿಸಿ ಭಾರತ ತಂಡ ಗೆಲ್ಲಲಿ ಅಂತ ಅಭಿಮಾನಿಗಳು ಅಶಿಸಿದ್ದಾರೆ.
Web Stories