ಇಸ್ಲಾಮಾಬಾದ್: ವಿಶ್ವಕಪ್ ಕ್ರಿಕೆಟ್‌ನಲ್ಲಿ (World Cup Cricket) ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ಮೊದಲನೇಯ ದೊಡ್ಡ ವಿಕೆಟ್ ಪತನವಾಗಿದೆ. ಪಾಕಿಸ್ತಾನ ಕ್ರಿಕೆಟ್‌ನ (Pakistan Cricket) ತಂಡದ ಆಯ್ಕೆ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ (Inzamam-ul-Haq) ರಾಜೀನಾಮೆ ನೀಡಿದ್ದಾರೆ.
ಆಯ್ಕೆ ಮಂಡಳಿ ಸರಿಯಾದ ಆಟಗಾರರನ್ನು ಆಯ್ಕೆ ಮಾಡಲಿಲ್ಲ ಎಂಬ ಟೀಕೆಯ ಬೆನ್ನಲ್ಲೇ ವಿಶ್ವಕಪ್ ಟೂರ್ನಿ ನಡೆಯುತ್ತಿರುವ ಮಧ್ಯದಲ್ಲೇ ಇಂಜಮಾಮ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.
Advertisement
Pakistan Cricket Board (PCB) has set up a five-member fact-finding committee to investigate allegations in respect of conflict of interest reported in the media pertaining to the team selection process.
The committee will submit its report and any recommendations to the PCB…
— PCB Media (@TheRealPCBMedia) October 30, 2023
Advertisement
ವಿಶ್ವಕಪ್‌ಗಾಗಿ ಪಾಕಿಸ್ತಾನದ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ವೈಯಕ್ತಿಕ ಹಿತಾಸಕ್ತಿ ಸಂಘರ್ಷದ ಆರೋಪ ಬಂದಿತ್ತು. ಈ ಆರೋಪಗಳಿಗೆ ಬೇಸತ್ತು ಇಂಜಮಾಮ್ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಈ ಆರೋಪಗಳ ತನಿಖೆಗಾಗಿ ಐದು ಸದಸ್ಯರ ಸತ್ಯ ಶೋಧನಾ ಸಮಿತಿಯನ್ನು ಪಿಸಿಬಿ ರಚಿಸಿದೆ.
Advertisement
2016 ರಿಂದ 19ರವರೆಗಿನ ಒಂದು ಅವಧಿಯಲ್ಲಿ ಪಾಕಿಸ್ತಾನದ ಮುಖ್ಯ ಆಯ್ಕೆಗಾರರಾಗಿದ್ದ ಇವರು ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಇದಾದ ಬಳಿಕ ವಿಶ್ವಕಪ್ ಟೂರ್ನಿಯ ವೇಳೆ ಆಗಸ್ಟ್‌ನಲ್ಲಿ ಮತ್ತೆ ಆಯ್ಕೆ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಇದನ್ನೂ ಓದಿ: ಪಾಕ್ ವಿರುದ್ಧ ಗೆದ್ದ ಅಫ್ಘಾನ್ ಕ್ರಿಕೆಟಿಗರಿಗೆ ಬಹುಮಾನ; ರತನ್ ಟಾಟಾ ಸ್ಪಷ್ಟನೆ ಏನು?
Advertisement
ಏನಿದು ಆರೋಪ?
ಸ್ಥಳೀಯ ಮಾಧ್ಯಮಗಳ ಪ್ರಕಾರ ಇಂಜಮಾಮ್ ಅವರು Yazo International Limited ಕಂಪನಿಯಲ್ಲಿ ಪಾಲುದಾರರಾಗಿದ್ದಾರೆ. ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ರಿಜ್ವಾನ್ ಈ ಕಂಪನಿಯನ್ನು ಪ್ರತಿನಿಧಿಸುತ್ತಿದ್ದಾರೆ. ತಮ್ಮ ಕಂಪನಿಯ ವೈಯಕ್ತಿಕ ಹಿತಾಸಕ್ತಿಗಾಗಿ ಇಂಜಮಾಮ್ ಈ ಆಟಗಾರರನ್ನು ಆಯ್ಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.
ಪಾಕಿಸ್ತಾನ ಒಟ್ಟು 6 ಪಂದ್ಯವಾಡಿದ್ದು ಸತತ 4 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ನೆದರ್‌ಲ್ಯಾಂರ್ಡ್ಸ್ ವಿರುದ್ಧ 84 ರನ್, ಶ್ರೀಲಂಕಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿತ್ತು. ನಂತರ ಅನುಕ್ರಮವಾಗಿ ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾದ ವಿರುದ್ಧ ಸೋಲನ್ನು ಅನುಭವಿಸಿತ್ತು. ಅದರಲ್ಲೂ ಅಫ್ಘಾನಿಸ್ತಾನದ ವಿರುದ್ಧ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.
ಬಾಬರ್ ಅಜಂ ವಿರುದ್ಧವೂ ಟೀಕೆ ಬಂದಿದ್ದು ಈ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಅವರನ್ನು ನಾಯಕ ಪಟ್ಟದಿಂದ ಕೆಳಗಿಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
Web Stories