ಚೆನ್ನೈ: ಏಕದಿನ ಕ್ರಿಕೆಟ್ ವಿಶ್ವಕಪ್ (World Cup 2023) ಟೂರ್ನಿಯಲ್ಲಿ ಭಾರತ ಆಸೀಸ್ ತಂಡವನ್ನು ಮಣಿಸಿ ಶುಭಾರಂಭ ಕಂಡಿದೆ. ಆದ್ರೆ ಡೆಂಗ್ಯೂ ಜ್ವರದಿಂದ ಆಸ್ಪತ್ರೆ ಸೇರಿರುವ ಟೀಂ ಇಂಡಿಯಾ ಸ್ಟಾರ್ ಆಟಗಾರ ಶುಭಮನ್ ಗಿಲ್ (Shubman Gill) ಸದ್ಯ ಚೆನ್ನೈನ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅಕ್ಟೋಬರ್ 14ರಂದು ಪಾಕಿಸ್ತಾನ ವಿರುದ್ಧ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೂ ಹಾಜರಾಗುವ ಸಾಧ್ಯತೆಗಳು ಕಡಿಮೆಯಿದೆ ಎಂದು ಹೇಳಲಾಗುತ್ತಿದೆ.
Advertisement
ಶುಭಮನ್ ಗಿಲ್ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದು ಪ್ಲೇಟ್‌ಲೇಟ್ಸ್‌ಗಳು ಕಡಿಮೆಯಾಗಿದ್ದು, ಅವರಿಗೆ ಇನ್ನಷ್ಟು ವಿಶ್ರಾಂತಿ ನೀಡಲು ಸೆ.11 ರಂದು ಅಫ್ಘಾನಿಸ್ತಾನ ವಿರುದ್ಧ ನಡೆಯುವ ಪಂದ್ಯಕ್ಕೂ ವಿಶ್ರಾಂತಿ ನೀಡಲಾಗಿದೆ. ಈ ನಡುವೆ ಗಿಲ್ ಪಾಕ್ (Pakistan) ಪಂದ್ಯಕ್ಕೂ ಗೈರಾಗಲಿದ್ದಾರೆ. ಆದರೇ ಇದೇ ಅಧಿಕೃತವೆಂದು ಹೇಳಲಾಗುವುದಿಲ್ಲ, ಅವರು ಸಂಪೂರ್ಣ ಚೇತರಿಕೆ ಕಂಡರೆ ತಂಡಕ್ಕೆ ಮರಳಬಹುದು. ಸದ್ಯ ವೈದ್ಯಕೀಯ ತಂಡದ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚೇತರಿಸಿಕೊಳ್ಳುತ್ತಿರುವ ಶುಭಮನ್ – ವಿಶ್ರಾಂತಿಗಾಗಿ ಅಘ್ಘಾನ್ ವಿರುದ್ಧದ ಪಂದ್ಯದಿಂದ ಹೊರಗೆ
Advertisement
Advertisement
ಪ್ರಸಕ್ತ ವರ್ಷದಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 1,200ಕ್ಕೂ ಹೆಚ್ಚು ರನ್ ಬಾರಿಸಿ ಫುಲ್ ಫಾರ್ಮ್‌ನಲ್ಲಿದ್ದ ಶುಭಮನ್ ಗಿಲ್, ಡೆಂಗ್ಯೂ ಜ್ವರದ ಕಾರಣ ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ (Australia) ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗಿದ್ದರು. ಇದರಿಂದ ಗಿಲ್ ಸ್ಥಾನದಲ್ಲಿ ಎಡಗೈ ಬ್ಯಾಟರ್ ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದಿದ್ದರು. ಇದನ್ನೂ ಓದಿ: World Cup 2023: ರಾಹುಲ್, ವಿರಾಟ ಶತಕದ ಹೋರಾಟ – ಭಾರತಕ್ಕೆ 6 ವಿಕೆಟ್‌ಗಳ ಅಮೋಘ ಜಯ
Advertisement
ಇತ್ತೀಚೆಗೆ ನಡೆದ ಏಕದಿನ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ನಡೆದ ಪಂದ್ಯದಲ್ಲಿ ಶುಭಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಪಾಕಿಸ್ತಾನದ ವೇಗದ ಬೌಲರ್‌ಗಳನ್ನ ಬೆಂಡೆತ್ತಿ ಅಮೋಘ ಅರ್ಧಶತಕ ಸಿಡಿಸಿದ್ದರು. ಅಲ್ಲದೇ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲೂ ಜವಾಬ್ದಾರಿಯುತ ಶತಕ ಸಿಡಿಸಿ ಮಿಂಚಿದ್ದರು. ಇದನ್ನೂ ಓದಿ: ನ್ಯೂಜಿಲೆಂಡ್‌ಗೆ 99 ರನ್‌ಗಳ ಭರ್ಜರಿ ಜಯ – ಡಚ್ಚರ ಗೇಮ್ ಪ್ಲ್ಯಾನ್‌ಗೆ ಅಭಿಮಾನಿಗಳ ಮೆಚ್ಚುಗೆ
ಇನ್ನೂ ಭಾನುವಾರ (ಅ.8) ನಡೆದ ಪಂದ್ಯದಲ್ಲಿ ಆಸೀಸ್ ನೀಡಿದ್ದ 200 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 2 ಓವರ್‌ಗಳಲ್ಲೇ ಕೇವಲ 2 ರನ್‌ಗಳಿಗೆ ಮೂರು ವಿಕೆಟ್‌ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಈ ವೇಳೆ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್ ರಾಹುಲ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 41.2 ಓವರ್‌ಗಳಲ್ಲೇ 201 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಇದನ್ನೂ ಓದಿ: ಪಾಕ್ ಪಂದ್ಯಕ್ಕೆ ಕೇಸರಿ ಜೆರ್ಸಿಯಲ್ಲಿ ಮೆನ್ ಇನ್ ಬ್ಲೂ ಕಣಕ್ಕೆ – ಬಿಸಿಸಿಐನಿಂದ ಖಡಕ್ ಉತ್ತರ
Web Stories