ಮುಂಬೈ: ಭಾರತದ ಆತಿಥ್ಯದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಬಲಿಷ್ಠ ತಂಡ (Team India Squad) ಪ್ರಕಟಗೊಂಡಿದೆ. ಇಂದು ಸಭೆ ನಡೆಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಸಾರಥ್ಯದಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ (ODI WorldCup 2023) ಟೂರ್ನಿಗೆ ರೋಹಿತ್ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟಿಸಿದೆ.
Here’s the #TeamIndia squad for the ICC Men’s Cricket World Cup 2023 ????#CWC23 pic.twitter.com/EX7Njg2Tcv
— BCCI (@BCCI) September 5, 2023
Advertisement
ಅಂದುಕೊಂಡಂತೆ ಕನ್ನಡಿಗ ಕೆ.ಎಲ್ ರಾಹುಲ್ (KL Rahul), ಶ್ರೇಯಸ್ ಅಯ್ಯರ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬುವ ಭರವಸೆ ಮೂಡಿಸಿದ್ದಾರೆ. ಇದರೊಂದಿಗೆ ವೆಸ್ಟ್ ಇಂಡೀಸ್ ಏಕದಿನ ಸರಣಿ ಹಾಗೂ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ಜವಾಬ್ದಾರಿಯುತ ಅರ್ಧಶತಕ ಬಾರಿಸಿದ ಯುವ ಆಟಗಾರ ಇಶಾನ್ ಕಿಶನ್ ಸಹ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನೂ ವಿಂಡೀಸ್ ಸರಣಿಯಲ್ಲಿ ಕೊಟ್ಟ ಅವಕಾಶ ಕೈಚೆಲ್ಲಿದ ಸಂಜು ಸ್ಯಾಮ್ಸನ್ ಅವರನ್ನ ತಂಡದಿಂದ ಕೈಬಿಡಲಾಗಿದ್ದು, ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಏಕದಿನ ವಿಶ್ವಕಪ್ ಟೂರ್ನಿಯಿಂದಲೂ ಸಂಜು ಸ್ಯಾಮ್ಸನ್ ಔಟ್?
Advertisement
Advertisement
ಕೆಎಲ್ ರಾಹುಲ್ ಸಂಪೂರ್ಣ ಫಿಟ್: ಏಷ್ಯಾ ಕಪ್ 2023 ಟೂರ್ನಿಯಲ್ಲಿ ಫಿಟ್ನೆಸ್ ಸಮಸ್ಯೆ ಎದುರಿಸಿದ್ದ ಕೆಎಲ್ ರಾಹುಲ್, ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಆದರೆ ವಿಶ್ವಕಪ್ ಆಡಲು ರಾಹುಲ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿದ್ದಾರೆ. ಇದನ್ನೂ ಓದಿ: ICC WorldCup 2023: ಭಾರತ-ಪಾಕಿಸ್ತಾನ ಮ್ಯಾಚ್ ದುಬಾರಿ – ಒಂದು ಟಿಕೆಟ್ 56 ಲಕ್ಷ ರೂ.ವರೆಗೆ ಮಾರಾಟ
Advertisement
“ಕೆಎಲ್ ರಾಹುಲ್ ಅವರಂತಹ ಅನುಭವಿ ಆಟಗಾರರ ಸಂಪೂರ್ಣ ಫಿಟ್ ಆಗಿರುವುದು ಭಾರತ ತಂಡದ ಪಾಲಿಗೆ ಶುಭಸುದ್ದಿ. ದುರದೃಷ್ಟವಶಾತ್ ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಕಾರಣ ಅವರು ಏಷ್ಯಾ ಕಪ್ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ, 50 ಓವರ್‌ಗಳ ವರೆಗೆ ವಿಕೆಟ್‌ಕೀಪಿಂಗ್ ಕೂಡ ಮಾಡಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿ ಅವರನ್ನ ವಿಶ್ವಕಪ್‌ಗೆ ಆಯ್ಕೆ ಮಾಡಲಾಗಿದೆ ಎಂದು ಅಗರ್ಕರ್ ತಿಳಿಸಿದ್ದಾರೆ.
ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್.
Web Stories