ಲಕ್ನೋ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ (Virat Kohli) ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈವರೆಗೆ ಆಡಿರುವ 5 ಪಂದ್ಯಗಳಲ್ಲಿ 1 ಶತಕ ಸೇರಿ ಒಟ್ಟು 354 ರನ್ ಗಳಿಸಿದ್ದಾರೆ.
ಈ ಮೂಲಕ ಪ್ರಸ್ತುತ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ 2ನೇ ಸ್ಥಾನದಲ್ಲಿದ್ದಾರೆ. 5 ಪಂದ್ಯಗಳಲ್ಲಿ 3 ಭರ್ಜರಿ ಶತಕಗಳೊಂದಿಗೆ 407 ರನ್ ಗಳಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್ ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ ಇನ್ನೊಂದು ಶತಕ ಸಿಡಿಸಿದರೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) 49 ಶತಕ ಸಿಡಿಸಿರುವ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವಿಶ್ವದಾಖಲೆಯನ್ನು ಸರಿಗಟ್ಟಲಿದ್ದಾರೆ. ಇದನ್ನೂ ಓದಿ: Record Break: ಭಾರತ-ಕಿವೀಸ್ ರೋಚಕ ಪಂದ್ಯಕ್ಕೆ ಗ್ರೌಂಡ್ ಹೊರಗಿನ ದಾಖಲೆಗಳೂ ಉಡೀಸ್
Advertisement
Advertisement
ಸಚಿನ್ ದಾಖಲೆ ಮುರಿಯುವ ಸನಿಹದಲ್ಲಿ ಕಿಂಗ್: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಒಟ್ಟು 78 ಶತಕಗಳನ್ನು ಸಿಡಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 48 ಶತಕ ಗಳಿಸಿರುವ ಕಿಂಗ್ ಕೊಹ್ಲಿ, ಈ ಟೂರ್ನಿಯಲ್ಲಿ ಇನ್ನೆರಡು ಶತಕಗಳನ್ನು ಸಿಡಿಸಿದರೆ, ಸಚಿನ್ ತೆಂಡೂಲ್ಕರ್ ಅವರ (49 ಶತಕ) ಶತಕಗಳ ದಾಖಲೆಯನ್ನು ಮುರಿಯಲಿದ್ದಾರೆ. ಇದನ್ನೂ ಓದಿ: ನಮ್ಮನ್ನು ಕ್ಷಮಿಸಿಬಿಡಿ ಪಾಕಿಸ್ತಾನ – ಅಫ್ಘಾನ್ ವಿರುದ್ಧ ಸೋಲಿನ ಬಳಿಕ ಅಬ್ದುಲ್ಲಾ ಶಫೀಕ್ ಭಾವುಕ ಟ್ವೀಟ್
Advertisement
Advertisement
ಮತ್ತೆ ಆ ತಪ್ಪು ಮಾಡದಿರಲಿ: ಕಳೆದ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿಗೆ ಶತಕ ಸಿಡಿಸುವ ಅವಕಾಶವಿತ್ತು. ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿದ್ದ ಕೊಹ್ಲಿ, ಕೊನೆಯಲ್ಲಿ ಬಿರುಸಿನ ಆಟಕ್ಕೆ ತಿರುಗಿದರು. 103 ಎಸೆತಗಳಲ್ಲಿ 95 ರನ್ ಗಳಿಸಿ ಆಡುತ್ತಿದ್ದಾಗ ಗೆಲುವಿಗೆ ಇನ್ನೂ 5 ರನ್ ಬಾಕಿಯಿತ್ತು. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್ ಕಬಳಿಸಿದ ಮೊದಲ ಭಾರತೀಯ
ಕೊಹ್ಲಿಯ ಶತಕಕ್ಕೂ ಅಷ್ಟೇ ರನ್ ಬೇಕಿತ್ತು. ಈ ವೇಳೆ 104ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಕೊಹ್ಲಿ ಕ್ಯಾಚ್ ನೀಡಿ ನಿರಾಸೆ ಅನುಭವಿಸಿದರು. ಕೋಟ್ಯಂತರ ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿದಂತಾಯಿತು. ಆದ್ದರಿಂದ ಕೊಹ್ಲಿ ಈ ಪಂದ್ಯದಲ್ಲಾದರೂ 49ನೇ ಶತಕ ಸಿಡಿಸಲಿ, ನ್ಯೂಜಿಲೆಂಡ್ ವಿರುದ್ಧ ಮಾಡಿದ ತಪ್ಪು ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವಂತೆ ಅಭಿಮಾನಿಗಳು ಸಲಹೆ ನೀಡಿದ್ದಾರೆ.
Web Stories