ಮುಂಬೈ: ವಿಶ್ವಕಪ್ ಕ್ರಿಕೆಟ್ (World Cup Cricket) ಮೊದಲ ಸೆಮಿಫೈನಲ್ (Semi Final) ಇಂದು ನಡೆಯಲಿದ್ದು ಟೀಂ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮತ್ತು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ವಿಶೇಷ ಸಾಧನೆ ಮಾಡಲಿದ್ದಾರೆ.
ಇವರಿಬ್ಬರು ಸತತ 4 ವಿಶ್ವಕಪ್ ಸೆಮಿಫೈನಲ್ ಪಂದ್ಯಗಳನ್ನು ಆಡುತ್ತಿರುವುದು ವಿಶೇಷ. 2011, 2015, 2019ರಲ್ಲಿ ಆಡಿದ್ದ ಇವರು 2023ರ ಸೆಮಿಫೈನಲ್ ಪಂದ್ಯದಲ್ಲೂ ಆಡುತ್ತಿದ್ದಾರೆ. ಇದನ್ನೂ ಓದಿ: ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ?
2019ರ ವಿಶ್ವಕಪ್ ವೇಳೆ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದ್ದರು. ಸೆಮಿ ಫೈನಲ್ ಪಂದ್ಯದಲ್ಲಿ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ 67 ರನ್(95 ಎಸೆತ, 6 ಬೌಂಡರಿ) ಹೊಡೆದಿದ್ದರೆ ವಿರಾಟ್ ಕೊಹ್ಲಿ 1 ರನ್ ಗಳಿಸಿ ಔಟಾಗಿದ್ದರು.
ವಿರಾಟ್ ಕೊಹ್ಲಿ 594 ರನ್ ಹೊಡೆಯುವ ಮೂಲಕ 2023ರ ವಿಶ್ವಕ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಹೊಡೆದ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. ಕೇನ್ ವಿಲಿಯಮ್ಸನ್ 187 ರನ್ ಹೊಡೆದಿದ್ದಾರೆ. 2011 ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಸೋತಿತ್ತು. 2015 ಮತ್ತು 2019ರ ಫೈನಲಿನಲ್ಲಿ ಕ್ರಮವಾಗಿ ಆಸ್ತ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೋತಿತ್ತು.
2011ರ ವಿಶ್ವಕಪ್ ಫೈನಲಿನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಜಯಗಳಿಸಿತ್ತು. 2015 ಮತ್ತು 2019 ವಿಶ್ವಕಪ್ ಸೆಮಿಫೈನಲಿನಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಭಾರತ ಸೋತಿತ್ತು.