ಮಿಂಚಿನ ಶತಕ; ವಿಶ್ವ ದಾಖಲೆ ಬರೆದ ಮ್ಯಾಕ್ಸ್‌ವೆಲ್‌

Public TV
1 Min Read
Glenn

ನವದೆಹಲಿ: ಆಸ್ಟ್ರೇಲಿಯಾ ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಶರವೇಗದ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್ (World Cup 2023) ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಕೇವಲ 40 ಬಾಲ್‌ಗಳಿಗೆ ಮಿಂಚಿನ ಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವಕಪ್‌ 2023 ಟೂರ್ನಿಯ ನೆದರ್ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್‌ ಮಿಂಚಿನ ಬ್ಯಾಟಿಂಗ್‌ ನಡೆಸಿದರು. ನೆದರ್ಲೆಂಡ್ಸ್‌ ಬೌಲರ್‌ಗಳನ್ನು ಚೆಂಡಾಡಿದ ಮ್ಯಾಕ್ಸ್‌ವೆಲ್‌, ಕೇವಲ 40 ಬಾಲ್‌ಗಳಿಗೆ ಶತಕ ಸಿಡಿಸಿದರು. 8 ಫೋರ್‌ ಮತ್ತು 8 ಸಿಕ್ಸರ್‌ ಬಾರಿಸುವ ಮೂಲಕ ಶರವೇಗದಲ್ಲಿ ಶತಕ ದಾಖಲಿಸಿದರು. ಇದನ್ನೂ ಓದಿ: ಇಂಗ್ಲೆಂಡ್‌ ಪಂದ್ಯದಿಂದಲೂ ಔಟ್‌ – ಪಾಂಡ್ಯಗೆ ಗಾಯ ಗಂಭೀರ ಸ್ವರೂಪದ್ದು

aiden markram

ವಿಶ್ವಕಪ್‌ ಇತಿಹಾಸದಲ್ಲೇ ಅತೀ ಕಡಿಮೆ ಬಾಲ್‌ಗಳಿಗೆ ಶತಕ ಸಿಡಿಸಿದ ಆಟಗಾರನಾಗಿ ಮ್ಯಾಕ್ಸ್‌ವೆಲ್‌ ಹೊರಹೊಮ್ಮಿದ್ದಾರೆ. ಶ್ರೀಲಂಕಾ ವಿರುದ್ಧ 49 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ದ.ಆಫ್ರಿಕಾ ತಂಡದ ಏಡೆನ್ ಮಾರ್ಕ್ರಾಮ್ ಅವರ ದಾಖಲೆಯನ್ನು ಮ್ಯಾಕ್ಸ್‌ವೆಲ್‌ ಬ್ರೇಕ್‌ ಮಾಡಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲ ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ, ನೆದರ್ಲೆಂಡ್ಸ್‌ಗೆ 400 ರನ್‌ಗಳ ಗುರಿ ನೀಡಿದೆ. 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಆಸ್ಟ್ರೇಲಿಯಾ 399 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ತಂಡದ ಪರವಾಗಿ ಡೇವಿಡ್‌ ವಾರ್ನರ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಶತಕ ಸಿಡಿಸಿದ್ದಾರೆ. ಇದನ್ನೂ ಓದಿ: World Cup 2023: ಡಿಕಾಕ್‌ ಡಿಚ್ಚಿಗೆ ಬಾಂಗ್ಲಾ ಬರ್ನ್‌ – 149 ರನ್‌ಗಳ ಜಯದೊಂದಿಗೆ 2ನೇ ಸ್ಥಾನಕ್ಕೆ ಜಿಗಿದ ಹರಿಣರು

ಅಬ್ಬರದ ಬ್ಯಾಟಿಂಗ್‌ ನಡೆಸಿದ ಡೇವಿಡ್‌ ವಾರ್ನರ್‌ 93 ಬಾಲ್‌ಗಳಿಗೆ 104 ರನ್‌ (11 ಫೋರ್‌, 3 ಸಿಕ್ಸರ್‌) ಬಾರಿಸಿದ್ದಾರೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ 44 ಬಾಲ್‌ಗಳಿಗೆ 106 ರನ್‌ ಸಿಡಿಸಿ (9 ಫೋರ್‌, 8 ಸಿಕ್ಸರ್‌) ಸಿಡಿಸಿ ಮಿಂಚಿದ್ದಾರೆ.

Web Stories

Share This Article