ಮ್ಯಾಂಚೆಸ್ಟರ್: ಪಾಕಿಸ್ತಾನ ವಿರುದ್ಧ ಮಹತ್ವದ ವಿಶ್ವಕಪ್ ಪಂದ್ಯದಲ್ಲಿ ಆಡುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಅಪರೂಪದ ಸಾಧನೆಯನ್ನು ಮಾಡಿದ್ದು, ಸಚಿನ್ ಬಳಿಕ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಂಡಿದ್ದಾರೆ.
ಇದುವರೆಗೂ ಧೋನಿ 341 ಏಕದಿನ ಪಂದ್ಯಗಳನ್ನು ಆಡಿದ್ದು, ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ 340 ಪಂದ್ಯಗಳನ್ನು ಆಡಿದ್ದರು. ಆ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಧೋನಿ ಹಿಂದಿಕ್ಕಿದ್ದಾರೆ. ಉಳಿದಂತೆ ಪಟ್ಟಿಯಲ್ಲಿ 461 ಏಕದಿನ ಪಂದ್ಯಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನ ಪಡೆದಿದ್ದಾರೆ.
Advertisement
Advertisement
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿಯೇ ಧೋನಿ ಮಹತ್ವದ ಸಾಧನೆ ಮಾಡಿರುವುದು ಅಭಿಮಾನಿಗಳ ಸಂತಸ ಹೆಚ್ಚಾಗಲು ಕಾರಣವಾಗಿದೆ. 13 ವರ್ಷಗಳಿಂದ ಟೀಂ ಇಂಡಿಯಾ ತಂಡದ ಭಾಗವಾಗಿರುವ ಧೋನಿ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಿದ್ದರು. ಆ ಬಳಿಕ ತಮ್ಮ ನಾಯಕತ್ವದಲ್ಲಿ ಐಸಿಸಿ ನಡೆಸುವ ಟಿ20, ಏಕದಿನ ಹಾಗೂ ಚಾಂಪಿಯನ್ಸ್ ಟ್ರೋಫಿಗಳಲ್ಲಿ ಗೆಲುವು ಪಡೆದು ತಂಡವನ್ನು ಮುನ್ನಡೆಸಿದ್ದರು. ಉಳಿದಂತೆ ಧೋನಿ ಏಷ್ಯಾ IX ತಂಡದ ಪರ 3 ಪಂದ್ಯಗಳನ್ನಾಡಿದ್ದಾರೆ.