ತಾಷ್ಕೆಂಟ್: ನೋಯ್ಡಾ (Noida) ಮೂಲದ ಮರಿಯನ್ ಬಯೋಟೆಕ್ (Marion Biotech) ಕಂಪನಿ ತಯಾರಿಸಿದ 2 ಕೆಮ್ಮಿನ ಸಿರಪ್‍ಗಳನ್ನು ಉಜ್ಬೇಕಿಸ್ತಾನದಲ್ಲಿರುವ (Uzbekistan) ಮಕ್ಕಳಿಗೆ (Child) ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದೆ.
ಮೆರಿಯನ್ ಬಯೋಟೆಕ್‍ನಿಂದ ತಯಾರಿಸಲ್ಪಟ್ಟ ಗುಣ್ಣಮಟ್ಟದ ವೈದ್ಯಕೀಯ ಉತ್ಪನ್ನಗಳನ್ನು ಪೂರೈಸಲು ವಿಫಲವಾಗಿದೆ. ಇದರಿಂದಾಗಿ ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತಯಾರಿಸಿರುವ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಕೆಮ್ಮು ಸಿರಪ್ ತೆಗೆದುಕೂಳ್ಳದಂತೆ ಡಬ್ಲ್ಯುಎಚ್‍ಒ ಸೂಚಿಸಿದೆ.
Advertisement
Advertisement
ಇಲ್ಲಿಯವರೆಗೆ ಔಷಧಿಯ ಗುಣಮಟ್ಟ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಮರಿಯನ್ ಬಯೋಟೆಕ್ ಯಾವುದೇ ಖಾತ್ರಿಯನ್ನು ನೀಡಿಲ್ಲ ಎಂದು ಉಲ್ಲೇಖಿಸಿದೆ.
Advertisement
ಡಿಸೆಂಬರ್‌ನಲ್ಲಿ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿತ್ತು. ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿತ್ತು. ಇದನ್ನೂ ಓದಿ: ಮೀನು ಹಿಡಿಯಲು ಹೋಗಿದ್ದವರ ಮೇಲೆ ಫೈರಿಂಗ್ ಪ್ರಕರಣ- ಮರಳಿನ ವಿಚಾರವೇ ಕೊಲೆಗೆ ಕಾರಣ
Advertisement
ಸಿರಪ್‍ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿತ್ತು. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅನ್ನು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಆರೋಪಿಸಿತ್ತು. ಇದನ್ನೂ ಓದಿ: NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದ್ದೆದ್ದ ಅಂಗನವಾಡಿ ಕಾರ್ಯಕರ್ತೆಯರು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k