InternationalLatestMain PostNational

ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

Advertisements

ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಯೊಬ್ಬ ಎದೆಗೆ ಗುಂಡು ಹಾರಿಸಿದ್ದು, ಅಬೆಗೆ ತೀವ್ರ ರಕ್ತಸ್ರಾವವಾಗಿದೆ.

ಈ ಆಘಾತಕಾರಿ ಘಟನೆಗೆ ವಿಶ್ವದ ನಾಯಕರು ಪ್ರತಿಕ್ರಿಯಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿಯ ಉಳಿವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ.

ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿ ತೀವ್ರ ಆಘಾತ ತಂದಿದೆ. ನಮ್ಮ ಆಲೋಚನೆ ಹಾಗೂ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಹಾಗೂ ಜಪಾನ್ ಜನರೊಂದಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

ಅಮೆರಿಕದ ರಾಯಭಾರಿ ರಹಮ್ ಇಮ್ಯಾನುಯೆಲ್, ಅಬೆ-ಸಾನ್ ಜಪಾನ್‌ನ ಅತ್ಯುತ್ತಮ ನಾಯಕ ಹಾಗೂ ಅಮೆರಿಕದ ಅಚಲ ಮಿತ್ರರಾಗಿದ್ದಾರೆ. ಅಮೆರಿಕ ಸರ್ಕಾರ ಹಾಗೂ ಅಮೆರಿಕದ ಜನರು ಅಬೆ-ಸಾನ್ ಅವರ ಕುಟುಂಬ ಹಾಗೂ ಜಪಾನ್‌ನ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡು ಹಾರಿಸಲಾಗಿದೆ ಎಂದು ಜಪಾನ್‌ನಿಂದ ಬಂದ ಆಘಾತಕಾರಿ ಸುದ್ದಿ – ಈ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬ ಹಾಗೂ ಜಪಾನ್‌ನ ಜನರೊಂದಿಗೆ ಇದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್, ಎಲ್ಲರಿಗೂ ನನ್ನಂತೆಯೇ ಆಘಾತ ಹಾಗೂ ದುಃಖ ತಂದಿದೆ ಎಂದು ನಾನು ಭಾವಿಸುತ್ತೇನೆ. ತೈವಾನ್ ಹಾಗೂ ಜಪಾನ್ ಎರಡೂ ಕಾನೂನು ಆಳ್ವಿಕೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು. ನನ್ನ ಸರ್ಕಾರದ ಪರವಾಗಿ, ನಾನು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

Live Tv

Leave a Reply

Your email address will not be published.

Back to top button