ಟೆಹರಾನ್: ದಶಕಗಳಿಂದಲೂ ಸ್ನಾನ ಮಾಡದೇ ಇದ್ದ ವಿಶ್ವದ ಅತ್ಯಂತ ಕೊಳಕು ಮನುಷ್ಯ (Dirtiest Man) ಎಂದೇ ಅಡ್ಡ ಹೆಸರು ಪಡೆದಿದ್ದ ಇರಾನಿನ (Iran) ವ್ಯಕ್ತಿ ನಿಧನರಾದರು.
50 ವರ್ಷಕ್ಕೂ ಹೆಚ್ಚು ಕಾಲ ಸ್ನಾನ ಮಾಡದೇ ಒಂಟಿಯಾಗಿದ್ದ ಅಮೌ ಹಾಜಿ (94) ದಕ್ಷಿಣ ಪ್ರಾಂತ್ಯದ ಫಾರ್ಸ್‍ನ ದೇಜ್ಗಾ ಗ್ರಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.
Advertisement
Advertisement
ಹಾಜಿ ತಾನು ಸ್ನಾನ ಮಾಡಿದರೆ ಅನಾರೋಗ್ಯಕ್ಕೆ ಒಳಗಾಗುತ್ತೇನೆ ಎಂದು ಸ್ನಾನ ಮಾಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಕೆಲವು ತಿಂಗಳ ಹಿಂದೆ ಮೊದಲ ಬಾರಿಗೆ ಅಲ್ಲಿನ ಗ್ರಾಮಸ್ಥರು ಆತನನ್ನು ಬಲವಂತವಾಗಿ ಸ್ನಾನಗೃಹಕ್ಕೆ ಕರೆದೊಯ್ದು ಸ್ನಾನ ಮಾಡಿಸಿದ್ದರು. ಇದನ್ನೂ ಓದಿ: ಮೌಢ್ಯಕ್ಕೆ ಸೆಡ್ಡು – ಗ್ರಹಣ ವೇಳೆ ಬಾಳೆಹಣ್ಣು, ಚುರುಮುರಿ ಸೇವಿಸಿದ ಜನ
Advertisement
2013ರಲ್ಲಿ ಹಾಜಿ ಜೀವನದ ಬಗ್ಗೆ ದಿ ಸ್ಟ್ರೇಂಜ್ ಲೈಫ್ ಆಫ್ ಅಮೌ ಹಾಜಿ ಎಂಬ ಒಂದು ಕಿರು ಚಿತ್ರವನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ ಆತ್ಮಹತ್ಯಾ ದಾಳಿಯೆಂದು ಪರಿಗಣಿಸಿ NIA ತನಿಖೆಗೆ ವಹಿಸಿ – ಅಣ್ಣಾಮಲೈ