ನವದೆಹಲಿ: ದೆಹಲಿಯಿಂದ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಭಾರತೀಯ ರೈಲ್ವೇ ಶೀಘ್ರದಲ್ಲೇ ಇದನ್ನು ಸಾರ್ವಜನಿಕ ಪ್ರಯಾಣಕ್ಕಾಗಿ ಉದ್ಘಾಟಿಸಲಿದೆ.
ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ ಸೇತುವೆ ವಿಶ್ವದಲ್ಲೇ ಅತಿ ಎತ್ತರದ ರೈಲ್ವೇ ಸೇತುವೆ ಎಂಬ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ಸೇತುವೆಯ ಉಕ್ಕಿನ ಕಮಾನು ಈ ತಿಂಗಳು ಪೂರ್ಣಗೊಳ್ಳಲಿದ್ದು, ಶೀಘ್ರವೇ ಉದ್ಘಾಟನೆಗೊಳ್ಳುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಲಿದೆ.
Advertisement
Advertisement
ಏನಿದರ ವಿಶೇಷತೆ?
ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಬಹುತೇಕ ಪೂರ್ಣಗೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಕತ್ರಾದಿಂದ ಬನಿಹಾಲ್‌ಗೆ ಸಂಪರ್ಕ ಕಲ್ಪಿಸುವ 111 ಕಿ.ಮೀ ಉದ್ದದ ರೈಲ್ವೇ ಹಳಿಯಲ್ಲಿ 12.6 ಕಿ.ಮೀ ಉದ್ದದ ಟಿ-49ಬಿ ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಶ್ರೀನಗರದಲ್ಲಿ 35 ಸುರಂಗಗಳು ಹಾಗೂ ಬನಿಹಾಲ್ ಮಾರ್ಗದಲ್ಲಿ ಒಟ್ಟು 37 ಸೇತುವೆಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿ ನಿತೀಶ್? – ದೂರವಾಣಿ ಕರೆಗಳ ಬಗ್ಗೆ ಸಿಎಂ ಹೇಳಿದ್ದೇನು?
Advertisement
Advertisement
ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ.
ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಈಗಾಗಲೇ 86 ಕಿ.ಮೀ ಸುರಂಗ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ.
ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಟ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದ್ದು, ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ: ನ್ಯಾ.ಸಂತೋಷ್ ಹೆಗ್ಡೆ
ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು.