ಟರ್ಕಿ: 72 ಸೆಂಟಿಮೀಟರ್ ಎತ್ತರವಿದ್ದ ಪ್ರಪಂಚದ ಮಾಜಿ ಕುಬ್ಜ ಮಹಿಳೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಎಲಿಫ್ ಕೊಕಾಮನ್(33) ಮೃತಪಟ್ಟಿದ್ದಾರೆ. 72 ಸೆಂಟಿಮೀಟರ್ ಎತ್ತರವಿದ್ದ(2.5 ಅಡಿ) ವಿಶ್ವದ ಮಾಜಿ ಕುಬ್ಜ ಮಹಿಳೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು. ಎಲಿಫ್ ಕೊಕಾಮನ್ ಓಸ್ಮಾನಿಯಾದ ಟರ್ಕಿಶ್ನ ಕದರ್ಲಿ ಪಟ್ಟಣದಲ್ಲಿ ವಾಸವಾಗಿದ್ದರು. ನಿನ್ನೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ
ಕಳೆದ ಮಂಗಳವಾರ ಅನಾರೋಗ್ಯಕ್ಕೀಡಾಗಿದ್ದ ಕೊಕಾಮನ್ ಅವರನ್ನ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು
ನ್ಯುಮೋನಿಯಾದಿಂದ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದರು ಎಂದು ತಿಳಿದುಬಂದಿದೆ. ಕೊಕಾಮನ್ ವಿಶ್ವದ ಅತಿ ಕುಬ್ಜ ಯುವತಿ ಎಂಬ ದಾಖಲೆಗೆ ಪಾತ್ರವಾಗಿದ್ದರು. 2010ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಗೊಂಡಿದ್ದರು.