ವಾಷಿಂಗ್ಟನ್: ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್‍ಗೆ ಅಮೆರಿಕ ಕೂಡ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ 1,169 ಮಂದಿಯನ್ನು ಕೊರೊನಾ ವೈರಸ್ ಬಲಿ ಪಡೆದಿದೆ.
ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಬಳಿಕ ವಿಶ್ವವ್ಯಾಪಿ ಹರಡಿತು. ಈ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದಕ್ಕೆ ಇಟಲಿಯಲ್ಲಿ ಹೆಚ್ಚಿನ ಸಾವು ಸಂಭವಿಸಿತ್ತು. ಆದರೆ ಈಗ ಚೀನಾ, ಇಟಲಿಯನ್ನು ಹಿಂದಿಕ್ಕಿ ಅತಿಹೆಚ್ಚಿನ ಪ್ರಮಾಣದಲ್ಲಿ ಸೋಂಕು ಅಮೆರಿಕದಲ್ಲಿ ಹರಡುತ್ತಿದೆ. ಈವರೆಗೆ ಅಮೆರಿಕದಲ್ಲಿ ಸುಮಾರು 2,26,374 ಜನರಿಗೆ ಕೊರೊನಾ ವೈರಸ್ ತಗುಲಿದ್ದು, 6,075 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅದರಲ್ಲೂ ಕಳೆದ 24 ಗಂಟೆಗಳಲ್ಲಿ 1,169 ಮಂದಿ ಸಾವನ್ನಪ್ಪಿದ್ದು ರಾಷ್ಟ್ರದಲ್ಲಿ ಆತಂಕವನ್ನು ಹೆಚ್ಚಿಸಿದೆ.
Advertisement
Advertisement
ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಟ್ರಂಪ್ ಅವರಿಗೆ ಸೋಂಕು ತಟ್ಟಿಲ್ಲ ಎಂಬುದು ದೃಢಪಟ್ಟಿತ್ತು. ಈಗ ಎರಡನೇ ಬಾರಿಗೆ ಟ್ರಂಪ್ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ಬಾರಿಯೂ ವರದಿ ನೆಗೆಟಿವ್ ಬಂದಿದೆ.
Advertisement
ವಿಶ್ವಾದ್ಯಂತ ರಣಕೇಕೆ ಹಾಕುತ್ತಿರುವ ಸೋಂಕಿಗೆ ಈವರೆಗೆ ಸುಮಾರು 10,16,330 ಮಂದಿ ತುತ್ತಾಗಿದ್ದಾರೆ. ಕೊರೊನಾ ವೈರಸ್‍ನಿಂದ 53,238 ಮಂದಿ ಸಾವನ್ನಪ್ಪಿದ್ದರೆ, 2,13,132 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.
Advertisement
ಇಟಲಿಯಲ್ಲಿ ಈವರೆಗೆ 1,15,242 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 13,919 ಮಂದಿ ಬಲಿಯಾಗಿದ್ದಾರೆ. ಇತ್ತ ಸ್ಪೇನ್‍ನಲ್ಲಿ 1,12,065 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 10,348 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಚೀನಾದಲ್ಲಿ 81,620 ಮಂದಿಗೆ ಸೋಂಕು ತಟ್ಟಿದ್ದು, 3,322 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ಭಾರತದಲ್ಲಿ 2,301 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, 56 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ಪಾಕಿಸ್ತಾನದಲ್ಲಿ 2,450 ಮಂದಿ ಸೋಂಕಿಗೆ ತುತ್ತಾಗಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ.