ಬೀದರ್: ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ ಮಾಡಿ, 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ನೆಲಮಂಗಲ | ರೈಲಿಗೆ ಸಿಲುಕಿ 24 ಮೇಕೆಗಳ ದಾರುಣ ಸಾವು, 4 ಲಕ್ಷ ನಷ್ಟ
Advertisement
ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷಕ್ಕೂ ಅಧಿಕ ಮೌಲ್ಯದ 6 ಕೆ.ಜಿ ಅಕ್ರಮ ಗಾಂಜಾ ಜಪ್ತಿ ಮಾಡಿ, ಮೂವರನ್ನು ಅರೆಸ್ಟ್ ಮಾಡಿದ್ದಾರೆ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆ ಮಾರಾಟ ಮಾಡಲು ಕೂಡಿಸಿಟ್ಟಿದ್ದ 1 ಲಕ್ಷ 29 ಸಾವಿರ ರೂ. ಮೌಲ್ಯದ 584 ನಶೆ ತರಿಸುವ ನಾರ್ಕೋಟಿಕ್ ಸಿರಪ್ ಬಾಟಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಪ್ರದೀಪ (SP Pradeep) ಗುಂಟಿ ಮಾತನಾಡಿ, ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇವುಗಳನ್ನು ನಿಗದಿತ ದರಕ್ಕಿಂತ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಶನಿವಾರ ಬೆಳಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅಂತಿಮ ದರ್ಶನಕ್ಕೆ ವ್ಯವಸ್ಥೆ