ವಾಷಿಂಗ್ಟನ್: ಇಸ್ರೇಲ್- ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು (Iran’s Supreme Leader Ali Khamenei) ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಅರ್ಧದಲ್ಲೇ ಜಿ7 ದೇಶಗಳ ಶೃಂಗಸಭೆಯಿಂದ ಹೊರ ಬಂದ ಬಳಿಕ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿ ಖಮೇನಿ ಶರಣಾಗಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಇರಾನ್ ವಾರ್ ಟೈಂ ಕಮಾಂಡರ್ ಹತ್ಯೆ – ಖಮೇನಿ ಹತ್ಯೆ ಬಳಿಕವಷ್ಟೇ ಯುದ್ಧಕ್ಕೆ ವಿರಾಮ ಎಂದ ಇಸ್ರೇಲ್
ಟ್ರಂಪ್ ಹೇಳಿದ್ದೇನು?
ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್ ಶಾಕ್
ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.