ನವದೆಹಲಿ: ಕಾಂಗ್ರೆಸ್ ಪಕ್ಷ (Congress Party) ಸೇರುವುದಕ್ಕಿಂತ ಬಾವಿಗೆ ಹಾರುವುದೇ ಒಳ್ಳೆಯದು ಎಂದು ಹೇಳಿದ್ದೆ ಅಂತ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಭೆಯೊಂದರಲ್ಲಿ ಮಾತನಾಡಿದ ಅವರು, ದಿವಂಗತ ಕಾಂಗ್ರೆಸ್ ನಾಯಕ ಶ್ರೀಕಾಂತ್ ಜಿಚ್ಕರ್ ಅವರ ಸಲಹೆಯನ್ನು ನೆನಪಿಸಿಕೊಂಡರು. ಇದನ್ನೂ ಓದಿ: ಅಕ್ಕಿ ಮಾರಾಟಕ್ಕೆ ಕೇಂದ್ರ ನಿರ್ಬಂಧ ಹೇರಿರುವ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟೀಕರಣ
ಬಿಜೆಪಿ ಪಕ್ಷ (BJP Party) ಕ್ಕಾಗಿ ಕೆಲಸ ಮಾಡಿದ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಳ್ಳುತ್ತಾ, ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ನೀವು ಉತ್ತಮ ಪಕ್ಷದ ಕಾರ್ಯಕರ್ತ ಮತ್ತು ನಾಯಕ. ಹೀಗಾಗಿ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಶ್ರೀಕಾಂತ್ ಜಿಚ್ಕರ್ ಕೇಳಿಕೊಂಡಿದ್ದರು. ಆಗ ಶ್ರೀಕಾಂತ್‍ಗೆ ಹೇಳಿದ್ದೆ, ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್‍ಗೆ ಸೇರುವುದಿಲ್ಲ ಎಂದಿದ್ದೆ ಅಂದ್ರು.
ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ. ನನಗೆ ಬಿಜೆಪಿ ಮತ್ತು ಅದರ ಸಿದ್ಧಾಂತದಲ್ಲಿ ಬಲವಾದ ನಂಬಿಕೆ ಇದೆ ಮತ್ತು ನಾನು ಅದಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಗಡ್ಕರಿ ಹೇಳಿದರು. ಇದನ್ನೂ ಓದಿ: ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಲಾಗದ ಕೆಲಸಗಳನ್ನು ಕಳೆದ 9 ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದೇಶದಲ್ಲಿ ದುಪ್ಪಟ್ಟು ಕೆಲಸ ಮಾಡಿದೆ. ದೇಶದ ಭವಿಷ್ಯವು ತುಂಬಾ ಉಜ್ವಲವಾಗಿದೆ ಎಮದು ಹೇಳುತ್ತಾ ಭಾರತವನ್ನು ಆರ್ಥಿಕ ಮಹಾಶಕ್ತಿಯನ್ನಾಗಿ ಮಾಡುವ ಮೋದಿ ಅವರ ದೃಷ್ಟಿಕೋನವನ್ನು ಶ್ಲಾಘಿಸಿದರು.