ನವದೆಹಲಿ: ಮಹಿಳಾ ಪ್ರೀಮಿಯರ್ (WPL Final) ಲೀಗ್‍ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ ರೋಚಕ ಗೆಲುವು ದಾಖಲಿಸುವ ಮೂಲಕ ಮೊದಲ ಬಾರಿಗೆ ಫೈನಲ್ ತಲುಪಿದೆ. ಇಂದು (ಭಾನುವಾರ) ದೆಹಲಿಯ ಅರುಣ್ ಜೆಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ 2024ರ (WPL 2024) ಫೈನಲ್ ಪಂದ್ಯದಲ್ಲಿ ಆರ್‌ಸಿಬಿ (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಗಳು ಸೆಣಸಾಡಲಿವೆ.
ಇಬ್ಬರಲ್ಲಿ ಯಾರೇ ಗೆದ್ದರೂ ಸಹ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ 2ನೇ ಬಾರಿಗೆ ಡಬ್ಲ್ಯೂಪಿಎಲ್ ಫೈನಲ್ ತಲುಪಿದ್ದು, ಬೆಂಗಳೂರು ತಂಡವು ಇದೇ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದೆ. ಇದರಿಂದಾಗಿ ಇಬ್ಬರಲ್ಲಿ ಯಾರೇ ಗೆದ್ದರೂ ಇಬ್ಬರಿಗೂ ಅದು ಮೊದಲ ಕಪ್ ಆಗಲಿದೆ. ಈ ಹೈವೋಲ್ಟೇಜ್ ಪಂದ್ಯವು ಸಂಜೆ 7 ಗಂಟೆಗೆ ಟಾಸ್ ನಡೆದು, 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈಗಾಗಲೇ ಪಂದ್ಯದ ಬಗ್ಗೆ ಕುತೂಹಲ ಹೆಚ್ಚಿದ್ದು, ಉಭಯ ತಂಡಗಳ ಅಭಿಮಾನಿಗಳಲ್ಲೂ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಐಪಿಎಲ್ ಸಂಪೂರ್ಣ ಲೀಗ್ ಭಾರತದಲ್ಲೇ ನಡೆಯುತ್ತೆ – ಜಯ್ ಶಾ ಸ್ಪಷ್ಟನೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (Smriti Mandhana), ಸೋಫಿ ಮೊಲಿನೆಕ್ಸ್, ಎಲ್ಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್, ಜಾರ್ಜಿಯಾ ವಾರೆಹಮ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್ ಸಿಂಗ್, ಸಿಮ್ರಾನ್ ಬಹದ್ದೂರ್, ಇಂದ್ರಾಣಿ ರಾಯ್, ಶುದಿನೆ ರಾಯ್, ಡಿ ಕ್ಲರ್ಕ್, ಸಬ್ಬಿನೇನಿ ಮೇಘನಾ, ಕೇಟ್ ಕ್ರಾಸ್, ಏಕ್ತಾ ಬಿಷ್ಟ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರಾಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತನಿಯಾ ಭಾಟಿಯಾ, ಅನ್ನಾಪರ್ ಮೊನ್‍ಡಾಲ್ ಸಾಧು, ಅಶ್ವನಿ ಕುಮಾರಿ. ಇದನ್ನೂ ಓದಿ:RCB – CSK ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಸೋಮವಾರದಿಂದಲೇ ಟಿಕೆಟ್ ಮಾರಾಟ ಶುರು, ದರ ಎಷ್ಟು?