ನವದೆಹಲಿ: ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ಧರಣಿಯಲ್ಲಿ ಪ್ರಮುಖರಾದ ಕುಸ್ತಿಪಟು ಬಜರಂಗ್ ಪೂನಿಯಾ (Bajrang Punia) ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ಫೋನ್‍ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ನಾವು ಅಪರಾಧ ಮಾಡಿದ್ದೇವೆ ಎಂದು ತೋರುವ ರೀತಿಯಲ್ಲಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಸಂಪರ್ಕದಲ್ಲಿರುವ ಯಾರನ್ನಾದರೂ ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
Advertisement
Advertisement
ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆಗಾಗಿ ನಾವು ಇಂದು ಕರಾಳ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ಹೋರಾಟದಲ್ಲಿ ಇಡೀ ರಾಷ್ಟ್ರವೇ ನಮ್ಮೊಂದಿಗೆ ಇರುವುದರಿಂದ ನಮ್ಮ ವಿಜಯದ ಬಗ್ಗೆ ನಮಗೆ ವಿಶ್ವಾಸವಿದೆ. ದಿನದಿಂದ ದಿನಕ್ಕೆ ನಮ್ಮ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.
Advertisement
ಈ ವೇಳೆ ವಿಶ್ವ ಚಾಂಪಿಯನ್‍ಶಿಪ್ ಹಾಗೂ ಒಲಂಪಿಕ್ ಪದಕ ವಿಜೇತರು ಅಥ್ಲೀಟ್ ಸೀಮಾ ಆಂಟಿಲ್ ಅವರನ್ನು ಟೀಕಿಸಿದರು. ಬ್ರಿಜ್ ಭೂಷಣ್‍ಗಿಂತ ನಾವು ಕ್ರೀಡೆಗೆ ಹಾನಿ ಮಾಡುತ್ತಿದ್ದೇವೆ ಎಂದು ಅವರು ಹೇಳಬಾರದಿತ್ತು. ಅವರು ಕ್ರಿಡಾಪಟುವಾಗಿ ನಮಗೆ ಆಗುತ್ತಿರುವ ತೊಂದರೆಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.
Advertisement
ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರೂ ಆಗಿರುವ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆ 18ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ಸತ್ಯವರ್ತ್ ಜೈದ್ಯನ್ ಹಾಗೂ ಜಿತೇಂದರ್ ಕಿನ್ಹಾ ಸೇರಿ 31 ಸದಸ್ಯರನ್ನೊಳಗೊಂಡ ಪ್ರತಿಭಟನಾಕಾರರು ತಮ್ಮ ಹಣೆಯ ಮೇಲೆ ಕಪ್ಪು ಪಟ್ಟಿಗಳನ್ನು ಕಟ್ಟಿಕೊಂಡರು. ಅಷ್ಟೇ ಅಲ್ಲದೇ ಅದನ್ನು ಕಪ್ಪು ದಿನ ಎಂದು ಕರೆದರು. ಇದನ್ನೂ ಓದಿ: ಬ್ರಿಜ್‌ಭೂಷಣ್ ಬಂಧನಕ್ಕೆ ಮೇ 21 ಗಡುವು ನೀಡಿದ ಕುಸ್ತಿಪಟುಗಳು