ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ.
8ನೇ ದಿನದ ಕುಸ್ತಿ ಅಖಾಡದಲ್ಲಿ ಪದಕಗಳ ಬಂಪರ್ ಬೆಳೆ ಸುರಿದಿದೆ. ಕೇವಲ ಕುಸ್ತಿಯಲ್ಲಿಯೇ ಭಾರತಕ್ಕೆ 5 ಪದಕಗಳನ್ನು ಪಡೆದುಕೊಂಡಿದೆ. 62 ಕೆಜಿ ವಿಭಾಗದಲ್ಲಿ ಸಾಕ್ಷಿ ಮಲಿಕ್, 65 ಕೆಜಿ ವಿಭಾಗದಲ್ಲಿ ಭಜರಂಗ್ ಪೂನಿಯಾ, 86 ಕೆಜಿ ವಿಭಾಗದಲ್ಲಿ ಕುಸ್ತಿಪಟು ದೀಪಕ್ ಪೂನಿಯಾ ಬಂಗಾರದ ಪದಕಗಳನ್ನ ಬಾಚಿಕೊಂಡಿದ್ದಾರೆ.
Advertisement
https://twitter.com/sbg1936/status/1555626699827847169
Advertisement
ಕುಸ್ತಿಯ 57 ಕೆಜಿ ವಿಭಾಗದಲ್ಲಿ ಅನ್ಶು ಮಲಿಕ್ ಬೆಳ್ಳಿ, ದಿವ್ಯಾ ಮೋಹಿತ್ ಕಂಚಿನ ಪದಕಗಳನ್ನ ಗೆದ್ದುಕೊಂಡಿದ್ದಾರೆ. ಭಾರತದ ಗ್ರಾಪ್ಲರ್ ದೀಪಕ್ ಪೂನಿಯಾ ಪುರುಷರ 86 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಪಾಕಿಸ್ತಾನದ ಎದುರಾಳಿ ಮೊಹಮ್ಮದ್ ಇನಾಮ್ ಅವರನ್ನು 3-0 ಅಂತರದಲ್ಲಿ ಬಗ್ಗು ಬಡಿಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ನಿನ್ನೆ ಕುಸ್ತಿಯಲ್ಲಿ ಗೆದ್ದ 3ನೇ ಚಿನ್ನದ ಪದಕವಾಗಿದೆ. ಇದನ್ನೂ ಓದಿ: CWG 2022: ಭಜರಂಗ್ ಪೂನಿಯಾ ಚಿನ್ನದ ಬೇಟೆ – ಭಾರತಕ್ಕೆ 7ನೇ ಚಿನ್ನ
Advertisement
Advertisement
2-0 ಹಂತದವರೆಗೂ ಮುನ್ನಡೆ ಸಾಧಿಸಿದ್ದ ಪೂನಿಯಾಗೆ ಅಂತಿಮ ಸುತ್ತಿನಲ್ಲಿ ತೀವ್ರ ಪೈಪೋಟಿ ಎದುರಾಗಿತ್ತು. ಪಂದ್ಯದಲ್ಲಿ ಪುನಿಯಾ ಉತ್ತಮ ಫಾರ್ಮ್ನಲ್ಲಿದ್ದರು. ಹಾಗಾಗಿ ಅಂತಿಮ ಮೂರು ನಿಮಿಷಗಳಲ್ಲಿ ತಮ್ಮದೇ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಪೂನಿಯಾ ವಿರುದ್ಧ ಪಾಯಿಂಟ್ ಕದಿಯಲು ಹೆಣಗಾಡಿದ ಪಾಕಿಸ್ತಾನದ ಕುಸ್ತಿಪಟು ಅಂತಿಮ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿ ಹೊರನಡೆದರು.
ಇದರಿಂದ ಭಾರತ ಈವರೆಗೆ 9 ಚಿನ್ನ, 8 ಬೆಳ್ಳಿ, 9 ಕಂಚಿನ ಪಕದ ಗೆದ್ದಿದ್ದು, 26 ಪದಕಗಳೊಂದಿಗೆ, ಪದಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ. ಪದಕ ಗೆದ್ದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.