ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಆಪ್ತ ಸಂಜಯ್ ಸಿಂಗ್ ಭಾರತ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅಸಮಾಧಾನ ಹೊರಹಾಕಿದ್ದಾರೆ.
ಸಂಜಯ್ ಸಿಂಗ್ ಆಯ್ಕೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿನೇಶ್, ಈಗಲೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ಕನಿಷ್ಠ ನಿರೀಕ್ಷೆಯಲ್ಲಿದ್ದೇವೆ. ಭಾರತದ ಕುಸ್ತಿ ಭವಿಷ್ಯವು ಕತ್ತಲೆಯಲ್ಲಿದೆ ಎಂಬುದು ದುಃಖಕರವಾದ ಸಂಗತಿ. ನಮ್ಮ ದುಃಖವನ್ನು ಯಾರಿಗೆ ಹೇಳೋಣ? ಹಾಗಾಗಿಯೇ ನಾವಿನ್ನೂ ಹೋರಾಡುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
Advertisement
Advertisement
ಸಂಜಯ್ ಸಿಂಗ್ (Sanjay Singh) ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಸುದ್ದಿಗೋಷ್ಠಿ ನಡೆಸಿದ್ದರು. ಈ ಸಂದರ್ಭದಲ್ಲಿಯೇ ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದರು. ಇದನ್ನೂ ಓದಿ: ಬ್ರಿಜ್ ಭೂಷಣ್ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!
Advertisement
ಏನಾಗಿತ್ತು?:
ಈ ಹಿಂದೆ ಕುಸ್ತಿ ಫೆಡರೇಷನ್ (Wrestling Federation of India) ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ
Advertisement
ಕೊನೆಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದರು. ಈ ವರ್ಷಾರಂಭದಲ್ಲಿ ಬ್ರಿಜ್ ಭೂಷಣ್ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.
ವಾರಣಾಸಿ ಮೂಲದ ಸಂಜಯ್ ಸಿಂಗ್, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ ಸುರೇಶ್