ನವದೆಹಲಿ: ಬಿಜೆಪಿ (BJP) ಸಂಸದ ಬ್ರಿಜ್‍ಭೂಷಣ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದಲ್ಲಿ ಆಪ್ರಾಪ್ತೆ ಎನ್ನಲಾದ ಸಂತ್ರಸ್ತೆ ಆಗ ಅಪ್ರಾಪ್ತೆ ಆಗಿರಲಿಲ್ಲ ಎನ್ನುವ ವಿಚಾರ ಹೊರ ಬಿದ್ದಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಈ ಹಿಂದೆ ಎಫ್‍ಐಆರ್‌ನಲ್ಲಿ ಅಪ್ರಾಪ್ತೆಗೆ ಬ್ರಿಜ್‍ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಂತ್ರಸ್ತೆಯ ತಂದೆ ಕಿರುಕುಳಕ್ಕೆ ಒಳಗಾದೆ ಎಂದು ಹೇಳುತ್ತಿರುವ ದಿನಕ್ಕೆ ಆಕೆ ಅಪ್ರಾಪ್ತೆ ಆಗಿರಲಿಲ್ಲ ಎಂದು ಹೇಳಿದ್ದಾರೆ. ಇದರಿಂದಾಗಿ ಮ್ಯಾಜಿಸ್ಟ್ರೇಟ್ ಎದುರು ಸಂತ್ರಸ್ತೆ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳ ವ್ಯೂಹ ರಚಿಸಲು ಮುಹೂರ್ತ
Advertisement
Advertisement
ಎಫ್‍ಐಆರ್‌ನಲ್ಲಿ ದಾಖಲಿಸಲಾದ ವಯಸ್ಸಿಗೆ ಸಂಬಂಧಿಸಿದ ಮಾಹಿತಿಯನ್ನು ಮಾರ್ಪಾಡು ಮಾಡಿಸಿದ್ದೇವೆ. ಹೀಗಾಗಿ ಪೋಕ್ಸೋ (POCSO) ಆರೋಪಕ್ಕೆ ಸಂಬಂಧಿಸಿ ಕೋರ್ಟ್ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಜೂ. 15ರೊಳಗೆ ಬ್ರಿಜ್‍ಭೂಷಣ್ ವಿರುದ್ಧ ತನಿಖೆ ಮುಗಿಯಲಿದೆ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ಬುಧವಾರ ತಿಳಿಸಿದ್ದರು. ಇದನ್ನೂ ಓದಿ: ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್