ನವದೆಹಲಿ: ಬಿಜೆಪಿ (BJP) ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶಂಕರ್ ಸಿಂಗ್ (Brij Bhushan Sharan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ತುರ್ತು ವಿಚಾರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಶುಕ್ರವಾರ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಲಿದೆ.
Advertisement
ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು (Wrestlers) ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು ನ್ಯಾಯ ಕೊಡಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕುಸ್ತಿಪಟುಗಳ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಈ ಸಂಬಂಧ ಯಾವುದೇ ಪ್ರಕರಣ ಸಹ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
Advertisement
Advertisement
ಇದರಿಂದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಬಗ್ಗೆ ಅರ್ಜಿಯಲ್ಲಿ ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಈ ವಿಷಯವನ್ನು ನ್ಯಾಯಾಲಯವು ಪರಿಗಣಿಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿತ್ತು. ಇದನ್ನೂ ಓದಿ: ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು
Advertisement
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಈ ಸಂಬಂಧ ಪ್ರಕರಣ ದಾಖಲಿಸುವವರೆಗೂ ತಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂಬುದಾಗಿ ಪ್ರತಿಪಾದಿಸಿದ್ದಾರೆ. ಅವರಲ್ಲಿ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಂತಹ ಸ್ಟಾರ್ ಕುಸ್ತಿಪಟುಗಳೂ ಇದ್ದಾರೆ.
ಏನಿದು ಕೇಸ್?
ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿನೇಶ್ ಫೋಗಟ್ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು
ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ತೆಗೆದುಹಾಕುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದೂ ಸಹ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.