ನವದೆಹಲಿ: ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಹೋರಾಟವನ್ನು ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ನಡೆಸಲಾಗುತ್ತದೆ ಎಂದು ಕುಸ್ತಿಪಟುಗಳು (Wrestlers) ಎಚ್ಚರಿಕೆ ನೀಡಿದ್ದಾರೆ.
ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಅಲ್ಲದೇ ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ. ಅದು ರಸ್ತೆಯ ಮೇಲಲ್ಲ, ನ್ಯಾಯಾಲಯದಲ್ಲಿ ಎಂದು ಟ್ವಿಟ್ಟರ್‍ನಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಪ್ರಕಟಿಸಿದ್ದಾರೆ. ಇದನ್ನೂ ಓದಿ: ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದ 10 ಕೆಜಿ ಚಿನ್ನ ಕಳವು – ದೇವಾಲಯ ಬಂದ್
हम आंदोलित पहलवानों ने ट्रायल्स को सिर्फ़ आगे बढ़ाने के लिए चिट्ठी लिखी थी, क्योंकि पिछले 6 महीने से आंदोलन में शामिल होने के कारण हम प्रैक्टिस नहीं कर पाए.
इस मामले की गंभीरता को हम समझते हैं इसलिए यह चिट्ठी आपसे साझा कर रहे. दुश्मन पहलवानों की एकता में सेंध लगाना चाहता है.… pic.twitter.com/Otvhhu1Z75
— Vinesh Phogat (@Phogat_Vinesh) June 25, 2023
ಡಬ್ಲ್ಯುಎಫ್‍ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಡಬ್ಲ್ಯುಎಫ್‍ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‍ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್‍ನಲ್ಲಿ ಹಾಕಿದ್ದಾರೆ. ಇದನ್ನು ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಶತ್ರುಗಳು ಕುಸ್ತಿಪಟುಗಳ ನಡುವಿನ ಒಗ್ಗಟ್ಟನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರನ್ನು ಗೆಲ್ಲಲು ಬಿಡುವುದಿಲ್ಲ ಎಂದು ವಿನೇಶ್ ಫೋಗಟ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ – ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?