ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

Public TV
2 Min Read
brij bhushan

ನವದೆಹಲಿ: ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ (Brij Bhushan Singh) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi’s Rouse Avenue court) ಗುರುವಾರ ಜಾಮೀನು ನೀಡಿದೆ.

ಎಂಪಿ, ಎಂಎಲ್‌ಎ ವಿಶೇಷ ನ್ಯಾಯಾಧೀಶರಾದ ಹರ್ಜೀತ್ ಸಿಂಗ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಅನುಮತಿಯಿಲ್ಲದೇ ಬ್ರಿಜ್ ಭೂಷಣ್ ದೇಶ ತೊರೆಯುವಂತಿಲ್ಲ ಹಾಗೂ ತನ್ನ ವಿರುದ್ಧ ಪ್ರಕರಣ ದಾಖಲಿಸಿದವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕುವಂತಿಲ್ಲ ಎಂದು ಕೋರ್ಟ್ ಎಚ್ಚರಿಕೆ ಕೊಟ್ಟಿದೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

Wrestlers

ಡಬ್ಲ್ಯುಎಫ್‌ಐನ ಮಾಜಿ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ. ಬ್ರಿಜ್ ಭೂಷಣ್ ಹಾಗೂ ವಿನೋದ್ ತೋಮರ್ ಅವರಿಗೆ ತಲಾ 25,000 ರೂ. ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ತೋಮರ್, ಬ್ರಿಜ್ ಭೂಷಣ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದರು ಹಾಗೂ ಕುಸ್ತಿ ಸಂಸ್ಥೆಯ ದೈನಂದಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಈ ವರ್ಷದ ಜನವರಿಯಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ ವಿನೋದ್ ತೋಮರ್ ಅವರನ್ನ ಅಮಾನತುಗೊಳಿಸಿತ್ತು.

Wrestler

ಒಲಿಂಪಿಕ್ಸ್ ಪದಕ ವಿಜೇತರಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಅನೇಕ ಅಪ್ರಾಪ್ತೆಯರು ಸೇರಿ 7 ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದರು. ಅಲ್ಲದೇ ಅವರನ್ನು ಬಂಧಿಸಬೇಕು ಹಾಗೂ ಡಬ್ಲ್ಯೂಎಫ್‌ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದರು. ಕಳೆದ ಜೂನ್ ತಿಂಗಳಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು 2 ಎಫ್‌ಐಆರ್ ಮತ್ತು 10 ದೂರುಗಳನ್ನ ದಾಖಲಿಸಿದ್ದರು. ಬ್ರಿಜ್ ಭೂಷಣ್ ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆಯಿಟ್ಟಿದ್ದರು, ಅನುಚಿತವಾಗಿ ದೇಹ ಸ್ಪರ್ಶಿಸುವುದು, ಹುಡುಗಿಯರ ಎದೆ ಮೇಲೆ ಕೈ ಹಾಕುವುದು, ಮೈ-ಕೈ ಮುಟ್ಟುವುದು, ಅವರನ್ನು ಹಿಂಬಾಲಿಸುವುದು ಆರೋಪ ಸೇರಿದಂತೆ 10 ದೂರುಗಳನ್ನ ದಾಖಲಿಸಿಕೊಂಡಿದ್ದರು. ಕಳೆದ ಏಪ್ರಿಲ್ 21 ರಂದೇ ದೂರು ದಾಖಲಾಗಿದ್ದು, ಏಪ್ರಿಲ್ 28 ರಂದು ಎರಡು ಈIಖ ದಾಖಲಾಗಿದೆ. ಭೂಷಣ್ ವಿರುದ್ಧ IPC ಸೆಕ್ಷನ್ 354, 354 (ಎ), 354 (ಡಿ) ಹಾಗೂ ಸೆಕ್ಷನ್ 34ರ ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article