ನವದೆಹಲಿ: ಇಲ್ಲಿನ ಜಂತರ್ ಮಂತರ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು (Wrestlers) ತಮ್ಮ ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ.
ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ಇತರ ದೇಶಗಳ ಕ್ರೀಡಾಪಟುಗಳನ್ನೂ ಸಂಪರ್ಕಿಸಿ ತಮ್ಮ ಹೋರಾಟವನ್ನ ಜಾಗತೀಕಗೊಳಿಸಲು ನಿರ್ಧರಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್‌ನನ್ನ ಬಂಧಿಸುವಂತೆ ಮೇ 21ರ ವರೆಗೆ ಗಡುವು ನೀಡಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು
ಕುಸ್ತಿಪಟುಗಳಾದ ಬಜರಂಗ್ ಪೂನಿಯಾ (Bajrang Punia), ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್, ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಕಳೆದ 23 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಜ್‌ಭೂಷಣ್ ಬಂಧನಕ್ಕೆ ಮೇ 21 ಗಡುವು ನೀಡಿದ ಕುಸ್ತಿಪಟುಗಳು
ಇದೀಗ ರೊಚ್ಚಿಗೆದ್ದಿರುವ ಕುಸ್ತಿಪಟುಗಳು ನಾವು ಪ್ರತಿಭಟನೆಯನ್ನು ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಇತರ ದೇಶಗಳಲ್ಲಿರುವ ಒಲಿಂಪಿಯನ್‌ಗಳು ಹಾಗೂ ಒಲಿಂಪಿಕ್ಸ್ ಪದಕ ವಿಜೇತರನ್ನ ಸಂಪರ್ಕಿಸಿ ಬೆಂಬಲ ಕೋರಿ ಪತ್ರ ಬರೆಯುತ್ತೇವೆ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.
ನಮ್ಮ ಪ್ರತಿಭೆನಟೆಯನ್ನ ಹತ್ತಿಕ್ಕಲು ಕೆಲವರು ಸಂಚು ಮಾಡುತ್ತಿದ್ದಾರೆ. ಇತ್ತೀಚೆಗೆ ನಾವು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆ ತರಲು ಹೋಗಿದ್ದಾಗ, ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಿದ್ದರು ಎಂದು ಇದೇ ವೇಳೆ ಆರೋಪಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಕುಡಿದ ಅಮಲಿನಲ್ಲಿದ್ದ ಪೊಲೀಸರು ರಾತ್ರಿ ವೇಳೆ ಹಲ್ಲೆ ನಡೆಸಿರುವುದಾಗಿ ಕುಸ್ತಿಪಟುಗಳು ಆರೋಪಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲು ಹೋಗಿದ್ದಾಗ ಪೊಲೀಸರು ಹಲ್ಲೆ ನಡೆಸಿರುವುದಾಗಿ ದೂರಿದ್ದರು. ಕೆಲವು ಕುಸ್ತಿಪಟುಗಳ ತಲೆಗೆ ಹೊಡೆತ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿತ್ತು. ಒಬ್ಬರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದರು. ಪ್ರತಿಭಟನೆ ಬಳಿಕ ನೋವನುಭವಿಸಿದ ಕುಸ್ತಿಪಟುಗಳು ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಕುಸ್ತಿಪಟುಗಳು ಮೇ 21ರ ಒಳಗೆ ಬಂಧಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.