ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

Public TV
1 Min Read
Wrestling Federation Of India Brij Bhushan Sharan Singh Sanjay Singh

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (Wrestling Federation Of India) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಬೆಂಬಲಿತ ಅಭ್ಯರ್ಥಿ ಸಂಜಯ್ ಸಿಂಗ್ (Sanjay Singh) ಗೆಲುವು ಸಾಧಿಸಿದ್ದಾರೆ.

ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. ಈ ಮೂಲಕ ಅನಿತಾ ಶೆರಾನ್ ಸೋಲು ಕಂಡಿದ್ದಾರೆ. ಸಂಜಯ್ ಸಿಂಗ್ ಡಬ್ಲ್ಯುಎಫ್‍ಐನ ಮಾಜಿ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

Vinesh Phogat

ಹಿಂದಿನ ಡಬ್ಲ್ಯುಎಫ್‍ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದ ನಂತರ ಅವರ ವಿರುದ್ಧ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಬ್ರಿಜ್ ಭೂಷಣ್ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಹಾಗೂ ಅವರ ಕುಟುಂಬಸ್ಥರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಜೂನ್ 7 ರಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರ ಕುಟುಂಬದ ಸದಸ್ಯರು ಅಥವಾ ಆಪ್ತರು ಯಾರೂ ಡಬ್ಲ್ಯುಎಫ್‍ಐ ಚುನಾವಣಾ ಕಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಭರವಸೆ ನೀಡಿದಾಗ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆದಿದ್ದರು.

ಸಂಜಯ್ ಸಿಂಗ್ ವಾರಣಾಸಿ ಮೂಲದವರಾಗಿದ್ದು, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್‌ ಸೇರಿ ಮತ್ತೆ ಮೂವರು ಸಂಸದರು ಲೋಕಸಭೆಯಿಂದ ಅಮಾನತು

Share This Article