DistrictsKarnatakaLatestLeading NewsMain PostUdupi

ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಸಾಹಿತಿ ಜಿ. ರಾಜಶೇಖರ್ ವಿಧಿವಶ

Advertisements

ಉಡುಪಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಪ್ರಖ್ಯಾತ ವಿಮರ್ಶಕ ಹಾಗೂ ಜನಪರ ಹೋರಾಟಗಾರರಾದ ಜಿ .ರಾಜಶೇಖರ್(75) ಅವರು ಅನಾರೋಗ್ಯದಿಂದ ಬುಧವಾರ ಉಡುಪಿಯ ಖಾಸಗಿ ಆಶ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದ ರಾಜಶೇಖರ್ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಗಂಭೀರವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 11:15ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಇಂದು ಫಲಿತಾಂಶ ಪ್ರಕಟ – ದ್ರೌಪದಿ ಮುರ್ಮು ಗ್ರಾಮದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ

ರಾಜಶೇಖರ್ ಅವರು 1946ರಲ್ಲಿ ಜನಿಸಿದರು. ನಂತರ ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ಮುಗಿಸಿ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿ ನಂತರ ಎಲ್‍ಐಸಿಯಲ್ಲಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ -ಸಮಾಜ ಹಾಗೂ ಸಾಂಸ್ಕೃತಿಕ ರಾಜಕಾರಣ ಸೇರಿದಂತೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅಷ್ಟೇ ಅಲ್ಲದೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆಯೂ ಕೂಡ ಬರೆಯುತ್ತಿದ್ದರು.

ರಾಜಶೇಖರ ಅವರ ಬಹುವಚನ ಭಾರತ ಕೃತಿಗೆ 2015ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಆದರೆ ಅದನ್ನು ಅವರು ಸ್ವೀಕರಿಸಲು ನಿರಾಕರಿಸಿದ್ದರು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

Live Tv

Leave a Reply

Your email address will not be published.

Back to top button