ಆದಿ ಪುರುಷ ಸಿನಿಮಾದ ಡೈಲಾಗ್ ರೈಟರ್ ಮನೋಜ್ ಮುಂತಶೀರ್ (Manoj Mantashir) ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ‘ಹನುಮಾನ್ (Hanuman) ದೇವರೇ ಅಲ್ಲ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪ ಸುರಿದ್ದಾರೆ. ಆದಿಪುರುಷ ಸಿನಿಮಾದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಈಗಾಗಲೇ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತ ಪಡಿಸುತ್ತಿವೆ. ಈ ನಡುವೆ ಹನುಮಾನ್ ದೇವರೇ ಅಲ್ಲ ಅನ್ನುವ ಮಾತು ಮತ್ತೆ ವಿವಾದಕ್ಕೆ (Controversy) ಕಾರಣವಾಗಿದೆ.
Advertisement
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ‘ಹನುಮಾನ್ ದೇವರಲ್ಲ. ಭಜರಂಗಿಯನ್ನು ನಾವು ದೇವರು ಮಾಡಿದ್ದೇವೆಯಷ್ಟೆ. ಹನುಮ ರಾಮನ ಭಕ್ತ. ರಾಮನ ಭಕ್ತ ದೇವರು ಹೇಗೆ ಆಗುತ್ತಾನೆ. ರಾಮನನ್ನು ಪೂಜಿಸುತ್ತೇವೆ ಎನ್ನುವ ಕಾರಣಕ್ಕಾಗಿ ಹನುಮನನ್ನೂ ಪೂಜಿಸುತ್ತೇವೆ ಎಂದು ಹೇಳಿದ್ದಾರೆ. ಈ ಮಾತೇ ಅವರಿಗೆ ಮುಳುವಾಗಿದೆ.
Advertisement
Advertisement
ಆದಿಪುರುಷ (Adipurush) ಸಿನಿಮಾದ ಬಗ್ಗೆ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಮನೋಜ್ ಅವರಿಗೆ ಜೀವ ಬೆದರಿಕೆ ಇದೆ ಎನ್ನುವ ಕಾರಣಕ್ಕಾಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಈ ಭದ್ರತೆಯ ನಡುವೆಯೂ ಅವರು ಮತ್ತೆ ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಚಿತ್ರತಂಡಕ್ಕೆ ನುಂಗಲಾರದ ತುತ್ತಾಗಿದೆ. ಇದನ್ನೂ ಓದಿ:ಫ್ಯಾಷನ್ ರೂಲ್ಸ್ ಬ್ರೇಕ್ ಮಾಡಿ, ನೆಕ್ಲೇಸ್ ಧರಿಸಿ ಹಾಡಿದ ಸಂಜಿತ್ ಹೆಗ್ಡೆ
Advertisement
ಈ ನಡುವೆ ಚಿತ್ರ ತಂಡ ಹೊಸದೊಂದು ವರಸೆ ಶುರು ಮಾಡಿಕೊಂಡಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.
ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.