ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
Advertisement
ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ,… pic.twitter.com/YmoM3y47Wo
— Siddaramaiah (@siddaramaiah) January 4, 2025
Advertisement
ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಅಸ್ಸಾದಿ ಅವರು ಸೇವೆ ಸಲ್ಲಿಸಿದ್ದರು. ವಿವಿಯ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.
Advertisement
Advertisement
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅಸ್ಸಾದಿ ಅವರು ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ, ದೆಹಲಿಯ ಜೆಎನ್‌ಯು ವಿವಿಯಲ್ಲಿ ಎಂ.ಫಿಲ್ ಹಾಗೂ ಪಿಹೆಚ್.ಡಿ ಪದವಿ ಪಡೆದಿದ್ದರು. ಚಿಕಾಗೊ ವಿವಿಯಲ್ಲಿ ಪೋಸ್ಟ್ ಡಾಕ್ಟೊರಲ್ ಪದವಿ ಪಡೆದಿದ್ದರು.