ಲಂಡನ್: ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ (WTC Final) ಪಂದ್ಯದ 4ನೇ ದಿನದಾಟ ಆರಂಭಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್ ಗಳಿಸಿದ್ದ ಆಸ್ಟ್ರೇಲಿಯಾ (Australia) 2ನೇ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲರ್‌ಗಳ ದಾಳಿಗೆ ತುತ್ತಾದರೂ, 370ಕ್ಕೂ ಅಧಿಕ ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪ್ರಮುಖ ಬ್ಯಾಟರ್‌ಗಳ ವಿಕೆಟ್ ಪಡೆದ ಟೀಂ ಇಂಡಿಯಾ (Team India) ಸ್ಪಿನ್ನರ್ ರವೀಂದ್ರ ಜಡೇಜಾ (Ravindra Jadeja) ಹೊಸ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದ್ದಾರೆ.
Advertisement
65 ಟೆಸ್ಟ್ ಪಂದ್ಯವನ್ನಾಡಿರುವ ಜಡೇಜಾ 24.25 ಸರಾಸರಿ ಹಾಗೂ 2.44ರ ಎಕಾನಮಿ ರೇಟ್‌ನಲ್ಲಿ 268 ವಿಕೆಟ್ ಪಡೆಯುವ ಮೂಲಕ ಬಿಶನ್ ಸಿಂಗ್ ಬೇಡಿ (Bishan Singh Bedi) ಅವರ ದಾಖಲೆಯನ್ನ ಮುರಿದಿದ್ದಾರೆ. ಬಿಶನ್ ಸಿಂಗ್ 67 ಪಂದ್ಯಗಳಲ್ಲಿ 266 ವಿಕೆಟ್ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಆದ್ರೆ ಜಡೇಜಾ 65 ಪಂದ್ಯಗಳಲ್ಲೇ ಈ ಸಾಧನೆ ಮಾಡಿರುವುದು ವಿಶೇಷ. ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 4ನೇ ಯಶಸ್ವಿ ಎಡಗೈ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.
Advertisement
Advertisement
ಶ್ರೀಲಂಕಾದ ರಂಗನಾ ಹೆರಾತ್ 93 ಪಂದ್ಯಗಳಲ್ಲಿ 433 ವಿಕೆಟ್, ಡೇನಿಯಲ್ ವೆಟ್ಟೋರಿ 113 ಪಂದ್ಯಗಳಲ್ಲಿ 362 ವಿಕೆಟ್ ಮತ್ತು ಇಂಗ್ಲೆಂಡ್‌ನ ಡೆರೆಕ್ ಅಂಡರ್‌ವುಡ್ 86 ಪಂದ್ಯಗಳಲ್ಲಿ 297 ವಿಕೆಟ್ ಪಡೆದಿದ್ದರೆ ಜಡೇಜಾ 65 ಪಂದ್ಯಗಳಲ್ಲಿ 268 ವಿಕೆಟ್ ಪಡೆದು 4ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: WTC Final: 3ನೇ ದಿನದಲ್ಲಿ ಜಡೇಜಾ ಜಾದು – ಆಸ್ಟ್ರೇಲಿಯಾಕ್ಕೆ 296 ರನ್‌ಗಳ ಮುನ್ನಡೆ
Advertisement
ಆಸ್ಟ್ರೇಲಿಯಾ ವಿರುದ್ಧದ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಏಕದಿನ ಕ್ರಿಕೆಟ್ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ 48 ರನ್ (51 ಎಸೆತ, 7 ಬೌಂಡರಿ, 1 ಸಿಕ್ಸ್) ಗಳಿಸಿದ್ದಾರೆ. ಅಲ್ಲದೇ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದ ಜಡೇಜಾ 2ನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಟಾಪ್ ಬ್ಯಾಟರ್ಸ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಟೀವ್ ಸ್ಮಿತ್ (34 ರನ್), ಟ್ರಾವಿಸ್ ಹೆಡ್ (18 ರನ್) ಹಾಗೂ ಕ್ಯಾಮರೂನ್ ಗ್ರೀನ್ (25 ರನ್) ವಿಕೆಟ್ ಕಬಳಿಸುವ ಮೂಲಕ ಜಡೇಜಾ ಹೊಸ ದಾಖಲೆ ಮಾಡಿದ್ದಾರೆ. ಇದನ್ನೂ ಓದಿ: ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ