Connect with us

Corona

ಯಾದಗಿರಿಗೆ ‘ಮಹಾ’ ಕಂಟಕ- 74 ಹೊಸ ಸೋಂಕಿತ ಪ್ರಕರಣ ದೃಢ

Published

on

ಯಾದಗಿರಿ: ಜಿಲ್ಲೆಯಲ್ಲಿ ಮತ್ತೆ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಪಾಟಿಸಿವ್ ಪ್ರಕರಣಗಳು ವರದಿಯಾಗಿದ್ದು, ಇಂದು 74 ಕೊರೊನಾ ಪಾಸಿಟಿವ್ ದೃಢಪಟ್ಟಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ
373ಕ್ಕೇರಿದೆ.

ಇಂದು ಪತ್ತೆಯಾಗಿರುವ 74 ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಹಿಂದಿರುಗಿದ್ದರು. ಇವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಕ್ವಾರಂಟೈನ್‍ನಲ್ಲಿರುವ ಎಲ್ಲಾ ಕಾರ್ಮಿಕರು ಮಹಾಮಾರಿ ಸೋಂಕು ಇರುವುದು ದೃಢವಾಗಿದೆ.

ಸೋಂಕಿತರನ್ನು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖರಾದ 27 ಜನರನ್ನು ಇಂದು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 57 ಜನ ಜಿಲ್ಲೆಯಲ್ಲಿ ಗುಣಮುಖರಾಗಿದ್ದಾರೆ. ಸಕ್ರೀಯ ಪ್ರಕರಣಗಳು 345ಕ್ಕೇರಿದೆ.