ಯಾದಗಿರಿ: ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ (Surapura) ತಾಲೂಕಿನ ತಿಂಥಣಿ (Tinthani) ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕೊಪ್ಪಳ (Koppal) ಜಿಲ್ಲೆಯ ಕುಕನೂರ್ ತಾಲೂಕಿನ ಮಂಗಳೂರು ಮೂಲದ ಮಂಗಳೇಶ ಬಡಿಗೇರ್ (26) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ
ಜಿಲ್ಲೆಯ ತಿಂಥಣಿ ಗ್ರಾಮಕ್ಕೆ ಸಂಬಂಧಿಕರ ಜವಳ ಕಾರ್ಯಕ್ರಮಕ್ಕೆ ಮಂಗಳೇಶ ಬಂದಿದ್ದ. ತಿಂಥಣಿ ಮೌನೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ. ಸ್ನಾನ ಮಾಡುವಾಗ ಕಾಲು ಜಾರಿದ್ದು, ನೀರು ಪಾಲಾಗಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಪೋಲಿಸರು ಆಗಮಿಸಿದ್ದು, ಸ್ಥಳೀಯ ಅಂಬಿಗರ ಸಹಾಯದಿಂದ ಸತತ ಮೂರು ಗಂಟೆಗಳ ಶೋಧ ಕಾರ್ಯ ನಡೆಸಿ, ಮೃತ ದೇಹವನ್ನು ಹೊರತೆಗೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸುರಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮರು ಮದುವೆಯಾದ ಬಾಲಿವುಡ್ ನಟಿ ಸನ್ನಿ ಲಿಯೋನ್