ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಸಿದ್ದಲಿಂಗ ಸ್ವಾಮಿ (Andola Sri Siddalinga Swamiji) ದೋಷಿ ಎಂದು ಯಾದಗಿರಿಯ ಸೀನಿಯರ್ ಸಿವಿಲ್ ಕೋರ್ಟ್ (Court) ತೀರ್ಪು ನೀಡಿದೆ.
ಯಾದಗಿರಿ (Yadagiri) ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 2015ರ ಜನವರಿ 2ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ (Police Station) ಪ್ರಕರಣ ದಾಖಲಾಗಿತ್ತು.
Advertisement
Advertisement
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಐಪಿಸಿ ಕಲಂ 153 (ಎ), 295ರಡಿಯಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನೋಲೆ ಅವರಿಂದ ತೀರ್ಪು ಹೊರಬಿದ್ದಿದೆ.
Advertisement
Advertisement
ಗುರುವಾರ ತೀರ್ಪು ಪ್ರಕಟಿಸಿರುವ ನ್ಯಾಯಾಧೀಶರು, ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ (Srirama Sene) ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ. ಇದನ್ನೂ ಓದಿ: 2 ದಶಕಗಳಿಂದ ಹಾಲಿ ಶಾಸಕರಿಗೆ ಸೋಲು – ಇದು ಆಳಂದ ವಿಶೇಷತೆ
ತೀರ್ಪು ನೀಡುತ್ತಿದ್ದಂತೆ ದೋಷಿಯ ಹಿನ್ನೆಲೆಯ ವರದಿ ನೀಡುವಂತೆ ಪ್ರೋಬೇಷನರಿ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ. ಹಿನ್ನೆಲೆಯ ವರದಿ ಆಧಾರದ ಮೇಲೆ ಆಂದೋಲ ಶ್ರೀಗಳಿಗೆ ಶಿಕ್ಷೆ ಪ್ರಮಾಣ ನಿರ್ಧಾರವಾಗಲಿದೆ. ಇದನ್ನೂ ಓದಿ: ರಾಜಕೀಯ ಅನುಭವ ಇಲ್ಲದೇ ಇದ್ರೂ ಶಿರಾದಲ್ಲಿ ತಾವರೆ ಅರಳಿಸಿದ ರಾಜೇಶ್ ಗೌಡ!