ಯಾದಗಿರಿ: ಮಳೆಯ ಅವಾಂತರಕ್ಕೆ ಟಿನ್ ಶೆಡ್ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್ (Gurumatkal) ತಾಲೂಕಿನ ಚಿಂತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ
Advertisement
ಮೃತ ವೃದ್ಧೆಯನ್ನು ಚಿಂತನಹಳ್ಳಿ ಗ್ರಾಮದ ನಿವಾಸಿ ಗುಂಜಲಮ್ಮ (68) ಎಂದು ಗುರುತಿಸಲಾಗಿದೆ.
Advertisement
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ರಾತ್ರಿ ಮಲಗಿರುವಾಗ ಸುರಿದ ಮಳೆಯ ರಭಸಕ್ಕೆ ಟಿನ್ ಶೆಡ್ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಯ ಜೊತೆಗಿದ್ದ ಆಕೆಯ ಸಹೋದರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಗುರುಮಠಕಲ್ ಪೊಲೀಸ್ ಠಾಣಾ (Gurumatkal Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್ ರಿಲೀಫ್ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ