ಯಾದಗಿರಿ: ಪೊಲೀಸರೇನು ಹುಚ್ಚರಾ ಎಂದು ಪ್ರತಿಭಟನಾ ನಿರತರರಿಗೆ ಸಿನಿಮಾ ಸ್ಟೈಲ್‍ನಲ್ಲಿ ಯಾದಗಿರಿ ಎಸ್.ಪಿ ಋಷಿಕೇಶ್ ಭಗವಾನ್ ಗರಂ ಆಗಿದ್ದಾರೆ.
ಇಂದು ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಅಂಬೇಡ್ಕರ್ ಭಾವಚಿತ್ರ ಸಹಿತ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಸಂರ್ಘಷ ಏರ್ಪಟಿತ್ತು. ಹೀಗಾಗಿ ಸ್ಥಳಕ್ಕೆ ಎಸ್.ಪಿ ಋಷಿಕೇಶ್ ಭಗವಾನ್ ಭೇಟಿ ನೀಡಿದ್ದರು.
Advertisement
ಈ ಸಂದರ್ಭದಲ್ಲಿ ಪ್ರತಿಭಟನೆ ಮಾಡುತ್ತಿದ್ದವರು ಪೊಲೀಸರ ವಿರುದ್ಧ ಘೋಷಣೆ ಕೂಗಲು ಮುಂದಾದರು. ಇದರಿಂದ ಸಿಡಿಮಿಡಿಗೊಂಡ ಎಸ್.ಪಿ ಋಷಿಕೇಶ್ ಪೊಲೀಸರು ನಿಮಗೆ ಹಚ್ಚಾರ ತರ ಕಾಣುತ್ತೇವಾ? ನಾವು ಏನ್ ಮಾಡಿದ್ದೀವಿ ನಿಮಗೆ ಎಂದು ಪ್ರತಿಭಟನಾಕಾರರ ವಿರುದ್ಧ ಗರಂ ಆದರು.
Advertisement
Advertisement
ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ ಫಲಕ ಅಳವಡಿಕೆಗೆ ಅನುಮತಿ ಇಲ್ಲವೆಂದು ಪೊಲೀಸರು ಅದನ್ನು ತೆರವುಗೊಳಿಸಿದ್ದರು. ನಾಮ ಫಲಕವನ್ನು ಅನಧಿಕೃತವಾಗಿ ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ 8 ಜನರ ಮೇಲೆ ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.
Advertisement
ಈ ವಿಚಾರದಲ್ಲಿ ಪೊಲೀಸರಿಗೆ ಕುರುಬ ಸಮುದಾಯದ ಕುಮ್ಮಕ್ಕಿದೆ. ಅದ್ದರಿಂದ ನಾಮಫಲಕ ತೆರವುಗೊಳಿಸಿದ್ದಾರೆಂದು ದಲಿತ ಸಂಘಟನೆಗಳು ಆರೋಪಿಸಿ, ತೆರವುಗೊಳಿಸಿದ ಜಾಗದಲ್ಲಿಯೇ ನಾಮಫಲಕ ಹಾಕಬೇಕೆಂದು ಹಳೆ ಠಾಣೆ ಹಿಂಭಾಗದ ರಸ್ತೆ ತಡೆದು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ.