ಯಾದಗಿರಿ: ಮಾನಸಿಕ ಖಿನ್ನತೆಯಿಂದ ಶಿಕ್ಷಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಎಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಮರಳುಸಿದ್ದಪ್ಪ (35) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಮೃತ ಮರಳುಸಿದ್ದಪ್ಪ ಗುರುಮಠಕಲ್ ತಾಲೂಕಿನ ಮಡೇಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 10 ವರ್ಷಗಳಿಂದ ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ತಾನು ಮಾನಸಿಕ ಖಿನ್ನತೆಗೆ ಒಳಗಾಗಿರುವ ಬಗ್ಗೆ ಮತ್ತು ಅದಕ್ಕೆ ಚಿಕಿತ್ಸೆಯ ಬಗ್ಗೆ ಮಡದಿ, ಸಹೋದರನಿಗೆ ನೇಣು ಹಾಕಿಕೊಳ್ಳುವ ಮುನ್ನ ಕರೆ ಮಾಡಿ ಹೇಳಿದ್ದರು ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಸಂಬಂಧ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.