Connect with us

Districts

ಬೆಳ್ಳಂಬೆಳಿಗ್ಗೆ ಝಳಪಿಸಿದ ಲಾಂಗ್- ಜಿ.ಪಂ ಸದಸ್ಯನ ಕೊಲೆಗೆ ಯತ್ನ

Published

on

ಯಾದಗಿರಿ: ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ದುಷ್ಕರ್ಮಿಗಳು, ಜಿಲ್ಲಾಡಳಿತ ಭವನದ ಸಮೀಪದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ.

ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಕಳುಹಿಸಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ ಗ್ರಾಮದ ನಿವಾಸಿಯಾದ ಮರಿಲಿಂಗಪ್ಪ ಅವರು, ಖಾನಾಪುರ್ ಎಸ್‍ಎಚ್ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.

ಮರಿಲಿಂಗಪ್ಪ ಇಂದು ಬೆಳಿಗ್ಗೆ ನಗರದ ಹೊರ ವಲಯದಲ್ಲಿ ಜಿಲ್ಲಾಡಳಿತ ಭವನದ ಸಮೀಪ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮರಿಲಿಂಗಪ್ಪ ಮೇಲೆ ಲಾಂಗ್ ನಿಂದ ದುಷ್ಕರ್ಮಿಗಳು ದಾಳಿ ಮಾಡಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮರಿಲಿಂಗಪ್ಪರನ್ನು ಕಂಡು ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿ, ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.