ಯಾದಗಿರಿ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚಿದ್ರೂ ಯಾರೊಬ್ಬರೂ ಸಹಾಯಕ್ಕೆ ಬರದೇ ಕೆಲ ಕಾಲ ರಸ್ತೆಯಲ್ಲೇ ಪರದಾಡಿದ ಮತ್ತೊಂದು ಅಮಾನವೀಯ ಘಟನೆ ಬುಧವಾರ ರಾತ್ರಿ ನಗರದ ಚಿತ್ತಾಪುರ ರಸ್ತೆಯಲ್ಲಿ ನಡೆದಿದೆ.
Advertisement
ಬುರಾನ್ ಗಾಯಗೊಂಡ ಬೈಕ್ ಸವಾರ. ಬೈಕ್‍ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬುರಾನ್ ತನ್ನನ್ನು ಆಸ್ಪತ್ರೆಗೆ ಸೇರಿಸಿ ಅಂತಾ ಪರಿಪರಿಯಾಗಿ ಬೇಡಿಕೊಂಡ್ರೂ ಯಾರೊಬ್ಬರೂ ಆತನ ಹತ್ತಿರ ಸುಳಿಯದೆ ಫೋಟೋ ಮತ್ತು ವಿಡಿಯೋ ತೆಗೆಯುದರಲ್ಲಿ ನಿರತರಾಗಿದ್ದರು.
Advertisement
Advertisement
ಕೊನೆಗೆ ತಡವಾಗಿ ಬಂದ ಅಂಬುಲೆನ್ಸ್ ನಲ್ಲಿ ಗಾಯಾಳು ಬುರಾನ್‍ನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ಘಟನೆಯಿಂದ ಗಂಭೀರ ಗಾಯಗೊಂಡ ಬುರಾನನ್ನು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Advertisement
ಯಾದಗಿರಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕೊಪ್ಪಳದಲ್ಲಿ ಬುಧವಾರ ಮಧ್ಯಾಹ್ನವಷ್ಟೇ ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ರೂ ಫೋಟೋ, ವೀಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿ ಯಾರೋಬ್ಬರೂ ಆತನ ಸಹಾಯಕ್ಕೆ ಬರದೆ ಮೃತಪಟ್ಟ ಘಟನೆ ಸುದ್ದಿಯಾದ ಬೆನ್ನಲ್ಲೇ ಇದೀಗ ಯಾದಗಿರಿಯಲ್ಲಿ ಜನ ಅಮಾನವೀಯತೆ ಮೆರೆದ ದುರಂತವೊಂದು ಬೆಳಕಿಗೆ ಬಂದಿದೆ
ಇದನ್ನೂ ಓದಿ: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ರೂ ಯುವಕನಿಗೆ ಯಾರೂ ಸಹಾಯ ಮಾಡಲಿಲ್ಲ!